ವಿಜಯಪುರ: ಜಿಲ್ಲೆಯ ರಾಜಕೀಯ ಪಕ್ಷಗಳು (ಬಿಎಲ್‌ಎ) ಬೂತ್ ಮಟ್ಟದ ಏಜೆಂಟರನ್ನು ತಕ್ಷಣನೇಮಿಸಿಕೊಳ್ಳುವಂತೆ ಬೆಂಗಳೂರು ಬಿಬಿಎಂಪಿ ಘನತ್ಯಾಜ್ಯ ನಿರ್ವಹಣಾ ವಿಶೇಷ ಆಯುಕ್ತರಾದ ವಿಜಯಪುರ ಜಿಲ್ಲಾ ಮತದಾರರ ಪಟ್ಟಿ ವೀಕ್ಷಕ ಡಿ.ರಂದೀಪ್ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಸಲಹೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯ ರಾಜಕೀಯ ಪಕ್ಷಗಳು ತಕ್ಷಣಬಿಎಲ್‌ಎಗಳನ್ನು ಹೆಚ್ಚಿನ ರೀತಿಯಲ್ಲಿ ನೇಮಿಸಿಕೊಳ್ಳಬೇಕು. ಬಿಎಲ್‌ಎ ನೇಮಕಾತಿಗೆ ಸಂಬಂಧಿಸಿ ಇರುವ ಮಾರ್ಗಸೂಚಿಗಳನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಪೂರೈಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈಗಾಗಲೇ ಜಿಲ್ಲೆಯ ಮತದಾರರ ಕರಡು ಪಟ್ಟಿ ಪ್ರಕಟಿಸಲಾಗಿದೆ. ಈ ಮತದಾರರ ಪಟ್ಟಿಯಲ್ಲಿ ಯಾವುದೇ ಲೋಪ ಇದ್ದಲ್ಲಿ, ಪುನರಾವರ್ತಿತ ಮತದಾರರು ಇದ್ದಲ್ಲಿ ತಕ್ಷಣ ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಭಾಗ ಸಂಖ್ಯೆ: 216ರಲ್ಲಿನಾಗಠಾಣ ಕ್ಷೇತ್ರದ ಮತದಾರರು ಹೆಚ್ಚಿನ ರೀತಿಯಲ್ಲಿ ಸೇರ್ಪಡೆಯಾಗಿರುವ ಬಗ್ಗೆ ಕಾಂಗ್ರೆಸ್ ಪಕ್ಷದ ಪ್ರತಿನಿಧಿ ಯಿಂದದೂರು ಬಂದ ಹಿನ್ನೆಲೆಯಲ್ಲಿ ಈ ಕುರಿತಂತೆ ಅಪರ ಜಿಲ್ಲಾ ಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಜೊತೆಗೆ ನಕಲಿ ಮತದಾರರನ್ನು ಗುರುತಿಸಲುಮತ್ತು ಈ ಕುರಿತು ಮತದಾರರ ಪಟ್ಟಿಯಲ್ಲಿ ಸರಿಪಡಿಸುವಂತೆ ನಿರ್ದೇಶನ ನೀಡಿದರು.
ಪಾರದರ್ಶಕ ಮತದಾರರ ಪಟ್ಟಿ ಸಿದ್ಧಪಡಿಸಲು ವಿಶೇಷ ಗಮನ ನೀಡಲಾಗುತ್ತಿದೆ. ನೂತನ ಕರಡು ಮತದಾರರ ಪಟ್ಟಿಗೆ ಸಂಬಂಧಿಸಿಪರಿಶೀಲನೆ ನಡೆಸಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ದೂರು ಸಲ್ಲಿಸಬಹುದಾಗಿದೆ ಎಂದರು. ಈವರೆಗೆ ಸಲ್ಲಿಸಲಾದ ದೂರುಗಳ ಮೇಲೆಯೂ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಅಪರ ಜಿಲ್ಲಾಧಿಕಾರಿ ಡಾ| ಔದ್ರಾಮ್ ಮಾತನಾಡಿ, ಅರ್ಹ ಮತದಾರರನ್ನು ನೋಂದಾಯಿಸಿಕೊಳ್ಳಲು, ಹಕ್ಕು ಮತ್ತುಆಕ್ಷೇಪಣೆ ಸಲ್ಲಿಸಲು ಡಿ. 17 ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ಈಗಾಗಲೇ ಎರಡು ಬಾರಿ ಮತದಾರರ ವಿಶೇಷ ನೋಂದಣಿ ಅಭಿಯಾನ ನಡೆಸಲಾಗಿದೆ. ಡಿ. 13ರಂದು ಮತ್ತೂಮ್ಮೆ ಅಭಿಮಾನ ನಡೆಯಲಿದೆ ಎಂದು ವಿವರಿಸಿದರು.
ಜಿಪಂ ಸಿಇಒ ಲಕ್ಷ್ಮೀಕಾಂತರೆಡ್ಡಿ, ಇಂಡಿ ಉಪವಿಭಾಗಾಧಿಕಾರಿ ರಾಹುಲ್‌ಸಿಂಧೆ ಸೇರಿದಂತೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮತ್ತು ಇತರ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.