Advertisement

ತಾಯಿಯ ಬುದ್ಧಿ ಮಾತಿಗೆ ನೊಂದು ಮಗಳ ಆತ್ಮಹತ್ಯೆ

11:50 AM Jan 13, 2018 | |

ಬೆಂಗಳೂರು: ಮನೆಯ ಕೆಲಸ ಕಾರ್ಯಗಳಲ್ಲಿ ಸಹಾಯ ಮಾಡುವಂತೆ ತಾಯಿ ಬುದ್ಧಿ ಹೇಳಿದ್ದಕ್ಕೆ ಮನನೊಂದ ಮಗಳು, ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಲಹಂಕ ನ್ಯೂಟೌನ್‌ನಲ್ಲಿ ಶುಕ್ರವಾರ ನಡೆದಿದೆ.

Advertisement

ಗಾರ್ಮೆಂಟ್ಸ್‌ ಒಂದರಲ್ಲಿ ಕೆಲಸ ಮಾಡುತ್ತಿರುವ ಶಿವನಾಯಕ್‌ ಮತ್ತು ಗಂಗಮ್ಮ ದಂಪತಿ ಪುತ್ರಿ ವರಲಕ್ಮಿ(17) ಆತ್ಮಹತ್ಯೆ ಮಾಡಿಕೊಂಡವರು. ಸರ್ಕಾರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ವರಲಕ್ಷ್ಮಿ ಶುಕ್ರವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದು, ಸಂಜೆ ವೇಳೆಗೆ ಸಹೋದರ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಲೇಜಿನಿಂದ ಬಂದು ಮನೆಯಲ್ಲಿ ಸುಮ್ಮನೆ ಕೂರುವ ಬದಲು ನನ್ನ ಕೆಲಸಕ್ಕೆ ಸಹಾಯ ಮಾಡುವಂತೆ ತಾಯಿ ಆಗಾಗ್ಗೆ ವರಲಕ್ಷಿಗೆ ಬುದ್ಧಿ ಹೇಳುತ್ತಿದ್ದರು. ಆದರೆ, ಮಗಳು ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುತ್ತಿರಲಿಲ್ಲ. ಶುಕ್ರವಾರ ಬೆಳಿಗ್ಗೆ ಕೆಲಸಕ್ಕೆ ಹೋಗುವಾಗ ತಾಯಿ ಗಂಗಮ್ಮ,

ಮನೆ ಕೆಲಸ ಮಾಡುವುದನ್ನು ಈಗ ಕಲಿಯದೆ ಇನ್ಯಾವಾಗ ಕಲಿಯುವೆ ಎಂದು ಬೈದಿದ್ದಾರೆ. ಇದರಿಂದ ನೊಂದ ಆಕೆ ಮನೆಯ ಕೋಣೆಯೊಂದರ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಲಹಂಕ ನ್ಯೂಟೌನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next