Advertisement

ಯುಯುಸಿಎಂಎಸ್‌ ವೆಬ್‌ಸೈಟ್‌ ಮೂಲಕ ಆನ್‌ಲೈನ್‌ ಪ್ರವೇಶ  ಪ್ರಕ್ರಿಯೆ

09:06 PM Jun 20, 2022 | Team Udayavani |

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್‌. ಅಶ್ವತ್ಥನಾರಾಯಣ ಅವರ ಸೂಚನೆ ಹಿನ್ನೆಲೆಯಲ್ಲಿ 2022-23ನೇ ಸಾಲಿನಿಂದ ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರಕಾರಿ ಮತ್ತು ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಯುಯುಸಿಎಂಎಸ್‌ (ಯೂನಿಫೈಡ್‌ ಯೂನಿವರ್ಸಿಟಿ ಆ್ಯಂಡ್‌ ಕಾಲೇಜು ಮ್ಯಾನೇಜ್‌ಮೆಂಟ್‌ ಸಿಸ್ಟಂ) ವೆಬ್‌ಸೈಟ್‌ ಮುಖಾಂತರ ಆನ್‌ಲೈನ್‌ ಪ್ರವೇಶ ಪ್ರಕ್ರಿಯೆ ನಡೆಸಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

Advertisement

ರಾಜ್ಯದ ಎಲ್ಲ ಸರಕಾರಿ ಹಾಗೂ ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2022-23ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯಗಳು ಮತ್ತು ಅವುಗಳ ವ್ಯಾಪ್ತಿಯ ಸಂಯೋಜಿತ ಕಾಲೇಜುಗಳಲ್ಲಿ ಪ್ರಥಮ ವರ್ಷದ ಪದವಿ ತರಗತಿಗಳಿಗೆ ಪ್ರವೇಶಾತಿಯನ್ನು ಯುಯುಸಿಎಂಎಸ್‌ ಆನ್‌ಲೈನ್‌ ತಂತ್ರಾಂಶದಲ್ಲೇ ಅರ್ಜಿಗಳನ್ನು ಆಹ್ವಾನಿಸಿ ಪ್ರಕ್ರಿಯೆ ಕೈಗೊಳ್ಳಲು ಸೂಚಿಸಿದೆ.

ಕಾಲೇಜುಗಳಲ್ಲಿ ಲಭ್ಯವಿರುವ ಕೋರ್ಸ್‌/ಕಾಂಬಿನೇಷನ್‌ಗಳ ವಿವರ, ಶುಲ್ಕಗಳ ವಿವರ ಮತ್ತು ವಿದ್ಯಾರ್ಥಿಗಳಿಗೆ ದೊರೆಯುವ ಸೌಲಭ್ಯಗಳು ಹಾಗೂ ಯುಯುಸಿಎಂಎಸ್‌ ವೆಬ್‌ಸೈಟ್‌ನ ಮಾಹಿತಿಯನ್ನು ಕಾಲೇಜಿನ ವೆಬ್‌ಸೈಟ್‌ ಹಾಗೂ ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ಪ್ರಕಟಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next