Advertisement
ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶುವೈದ್ಯಕೀಯ ವಿಜ್ಞಾನ, ಬಿ-ಫಾರ್ಮಾ, ಡಿ-ಫಾರ್ಮಾ ಸಹಿತ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರತಿ ವರ್ಷ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸುತ್ತದೆ. ಇತ್ತೀಚಿನ ವರ್ಷಗಳ ಬಹುತೇಕ ಎಲ್ಲ ಪ್ರವೇಶ ಪರೀಕ್ಷೆಗಳು ಆನ್‌ಲೈನ್‌ನಲ್ಲೇ ನಡೆಯುತ್ತಿರುವುದರಿಂದ ಸಾಮಾನ್ಯ ಪ್ರವೇಶ ಪರೀಕ್ಷೆ ಕೂಡ ಆನ್‌ಲೈನ್‌ನಲ್ಲಿ ನಡೆಸುವ ಸಂಬಂಧ 2019ನೇ ಸಾಲಿನಲ್ಲಿಯೇ ಪ್ರಾಧಿಕಾರ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿತ್ತು. ಈ ಹಿನ್ನೆಲೆಯಲ್ಲಿಯೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯ ಜತೆಗೆ ದಾಖಲಾತಿ ಪರೀಶಿಲನೆಯನ್ನು ಬಹುತೇಕ ಆನ್‌ಲೈನ್‌ನಲ್ಲೇ ಮಾಡಿಸುವ ವ್ಯವಸ್ಥೆಗೆ ಚಾಲನೆ ನೀಡಿದೆ. ಅಲ್ಲದೆ ಮೊಬೈಲ್ ಮೂಲಕ ಅರ್ಜಿಯನ್ನು ಸಲ್ಲಿಸಲು ವ್ಯವಸ್ಥೆ ಮಾಡಿತ್ತು.
Related Articles
ಪ್ರಾಧಿಕಾರದಲ್ಲಿ ಆಡಳಿತಾಧಿಕಾರಿ ಹುದ್ದೆಗೆ ಬಹಳಷ್ಟು ಪ್ರಾಮುಖ್ಯತೆಯಿದೆ. ಬಹುತೇಕ ನಿರ್ಧಾರಗಳ ಜತೆಗೆ ನಿತ್ಯ ಅನೇಕ ಸಮಸ್ಯೆಗಳನ್ನು ಹೊತ್ತು ಬರುವ ವಿದ್ಯಾರ್ಥಿಗಳಿಗೆ ಆಡಳಿತಾಧಿಕಾರಿಗಳೇ ಪರಿಹಾರ ನೀಡಬೇಕು. ಆದರೆ ಕಳೆದ ಐದಾರು ತಿಂಗಳುಗಳಿಂದ ಆಡಳಿತಾಧಿಕಾರಿ ಹುದ್ದೆ ಖಾಲಿಯಿದೆ.
Advertisement
ಸದ್ಯಕ್ಕೆ ಆನ್‌ಲೈನ್‌ನಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸುವ ಯಾವ ನಿರ್ಧಾರವೂ ಸರಕಾರದ ಮುಂದೆ ಇಲ್ಲ. ಹಿಂದಿನ ಪದ್ಧತಿಯಂತೆ ಪ್ರವೇಶ ಪರೀಕ್ಷೆ ನಡೆಯಲಿದೆ.-ಡಾ|ಅಶ್ವತ್ಥ್ ನಾರಾಯಣ್, ಉನ್ನತ ಶಿಕ್ಷಣ ಸಚಿವ