Advertisement
1-9ನೇ ಕ್ಲಾಸ್‌ಗೆ ಆನ್‌ಲೈನ್ ತರಗತಿಗೆ ಸಚಿವ ಸೋಮಶೇಖರ್ ಸೂಚನೆ
Related Articles
Advertisement
ಮೈಸೂರು: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಮೈಸೂರು ನಗರದ ಪೊಲೀಸ್ ಕಮೀಷನರೇಟ್ ಘಟಕದ ವ್ಯಾಪ್ತಿಯಲ್ಲಿ ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ವೈಕುಂಠ ಏಕಾದಶಿ ದಿನದಂದು ಪೂರ್ಣ ಪ್ರಮಾಣದ ಕೋವಿಡ್ ಲಸಿಕೆ ಪಡೆದ 50 ಜನರಿಗೆ ಮಾತ್ರ ದೇವಸ್ಥಾನಗಳಲ್ಲಿ ಒಂದು ಬಾರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಬೇಕು. ಯಾವುದೇ ಸೇವೆಗೆ ಅವಕಾಶ ಇರುವುದಿಲ್ಲ ಎಂದು ಆದೇಶ ಹೊರಡಿಸಲಾಗಿದೆ. ಮೈಸೂರು ನಗರದ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಈ ಕುರಿತು ಬುಧವಾರ ಆದೇಶ ಹೊರಡಿಸಿದ್ದಾರೆ. ವೈಕುಂಠ ಏಕಾದಶಿ ಹಾಗೂ ಸಂಕ್ರಾಂತಿ ಹಬ್ಬಗಳ ಪ್ರಯುಕ್ತ ದೇವಾಲಯಗಳ ಶಾಸ್ತ್ರ , ಸಂಪ್ರದಾಯದಂತೆ ದೇವಾಲಯಗಳ ಒಳ ಆವರಣದಲ್ಲಿ ಮಾತ್ರ ದೈನಂದಿನ ಪೂಜಾ ಕೈಂಕರ್ಯಗಳನ್ನು ನಡೆಸಬಹುದು. ಹಬ್ಬಗಳ ಆಚರಣೆಯಲ್ಲಿ ಯಾವುದೇ ರೀತಿಯ ಮೆರವಣಿಗೆ, ಮನರಂಜನಾ ಕಾರ್ಯಕ್ರಮಗಳನ್ನು ಏರ್ಪಡಿಸುವಂತಿಲ್ಲ. ಈ ಮಾರ್ಗಸೂಚಿಯನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಾ.ಚಂದ್ರಗುಪ್ತ ಎಚ್ಚರಿಕೆ ನೀಡಿದ್ದಾರೆ.
ಎಸ್ಸೆಸ್ಸೆಲ್ಸಿ ಭೌತಿಕ ತರಗತಿ ನಡೆಸಲು ಡೀಸಿ ಡಾ.ಬಗಾದಿ ಗೌತಮ್ ಆದೇಶ
ಮೈಸೂರು: ಮೈಸೂರು ನಗರ ಹಾಗೂ ಮೈಸೂರು ತಾಲೂಕಿನಲ್ಲಿ 10ನೇ ತರಗತಿಯ ಭೌತಿಕ ತರಗತಿಗಳನ್ನು ನಡೆಸಲು ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ. ಮೈಸೂರು ನಗರ ಹಾಗೂ ಮೈಸೂರು ತಾಲೂಕು ವ್ಯಾಪ್ತಿಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ ವಸತಿ ಶಾಲೆಗಳನ್ನು ಒಳಗೊಂಡಂತೆ ಅಂಗನವಾಡಿ, ನರ್ಸರಿ, 1ರಿಂದ 10ನೇ ತರಗತಿವರೆಗೆ ಭೌತಿಕ ತರಗತಿ ಗಳನ್ನು ಸ್ಥಗಿತಗೊಳಿಸಿ ಜಿಲ್ಲಾಧಿಕಾರಿಗಳು ಮಂಗಳವಾರ ಆದೇಶ ಹೊರಡಿಸಿದ್ದರು. ಆದರೆ, ಬುಧವಾರ ಮತ್ತೂಂದು ಆದೇಶ ಹೊರಡಿಸಿ 10ನೇ ತರಗತಿಗೆ ಮಾತ್ರ ಭೌತಿಕ ತರಗತಿಗಳನ್ನು ನಡೆಸಲು ಅವಕಾಶ ಕಲ್ಪಿಸಿದ್ದಾರೆ. 10¤ನೇ ತರಗತಿಗೆ ಕೆಎಸ್‌ಇಇಬಿ ವತಿಯಿಂದ ಪರೀಕ್ಷೆ ನಡೆಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಭೌತಿಕ ಶಿಕ್ಷಣದ ಅಗತ್ಯ ಇರುತ್ತದೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ 15 -18 ವಯಸ್ಸಿನವರಿಗೆ ಲಸಿಕೆ ನೀಡುವುದು ಪ್ರಗತಿಯಲ್ಲಿದೆ. 10ನೇ ತರಗತಿ ವಿದ್ಯಾರ್ಥಿಗಳು ಈ ವಯೋಮಾನದ ವ್ಯಾಪ್ತಿಗೆ ಬರುತ್ತಾರೆ. ಅವರು ಶಾಲೆಗೆ ಆಗಮಿಸುವುದರಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯವು ನಿಗದಿತ ಅವಧಿ ಯಲ್ಲಿ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಕೋವಿಡ್‌ನ ಎಲ್ಲ ಮುನ್ನೆಚರಿಕೆ ಕ್ರಮಗಳನ್ನು ಕೈಗೊಂಡು 10ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ನಡೆಸಲು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.