Advertisement

Online Gaming; ಜಿಎಸ್‌ಟಿ ಪೂರ್ವಾನ್ವಯವಿಲ್ಲ: ಕೇಂದ್ರ ಸ್ಪಷ್ಟನೆ

12:45 AM Oct 08, 2023 | Team Udayavani |

ಹೊಸದಿಲ್ಲಿ: ಆನ್‌ಲೈನ್‌ ಗೇಮಿಂಗ್‌ ಕಂಪೆನಿಗಳಿಗೆ ಪೂರ್ವಾನ್ವಯವಾಗುವಂತೆ ಶೇ.28ರಷ್ಟು ಜಿಎಸ್‌ಟಿ ವಿಧಿಸುವುದಿಲ್ಲ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ. ಶನಿವಾರ ನಡೆದ 52ನೇ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಆನ್‌ಲೈನ್‌ ಗೇಮಿಂಗ್‌ ಕಂಪೆನಿಗಳಿಗೆ ಪೂರ್ವಾನ್ವಯವಾಗುವಂತೆ ಜಿಎಸ್‌ಟಿ ವಿಧಿಸುವ ಕುರಿತು ಹಲವು ರಾಜ್ಯಗಳು ಧ್ವನಿ ಎತ್ತಿದವು.

Advertisement

ಈ ಬಗ್ಗೆ ಮಾತನಾಡಿದ ಕೇಂದ್ರ ಕಂದಾಯ ಸಚಿವಾಲಯದ ಕಾರ್ಯದರ್ಶಿ ಸಂಜಯ್‌ ಮಲ್ಹೋತ್ರಾ, “ಅ.1ರಿಂದ ಆನ್‌ಲೈನ್‌ ಗೇಮಿಂಗ್‌ಗಳ ಮೇಲೆ ಶೇ.28ರಷ್ಟು ಜಿಎಸ್‌ಟಿ ವಿಧಿಸುವ ನಿಯಮ ಜಾರಿಗೆ ಬಂದಿದೆ. ಈ ನಿಯಮ ಪೂರ್ವಾನ್ವಯ ಆಗುವುದಿಲ್ಲ’ ಎಂದು ತಿಳಿಸಿದ್ದಾರೆ. 55,000 ಕೋಟಿ ರೂ. ತೆರಿಗೆ ಬಾಕಿ ಹಿನ್ನೆಲೆಯಲ್ಲಿ ಕಳೆದ 2 ವಾರಗಳಿಂದ ಆನ್‌ಲೈನ್‌ ಗೇಮಿಂಗ್‌ ಕಂಪೆನಿಗಳಿಗೆ ಇಲಾಖೆಯು ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next