Advertisement
ವೆಬ್ ಕಾಸ್ಟಿಂಗ್ಕಾರ್ಯಕ್ರಮವನ್ನು ವೆಬ್ ಕಾಸ್ಟಿಂಗ್ ಮೂಲಕ ನೇರ ಪ್ರಸಾರ ಮಾಡುವುದು ಸೇರಿದಂತೆ ಫೇಸ್‌ಬುಕ್ ಲೈವ್ ಹಾಗೂ ಆನ್‌ಲೈನ್ ಮೂಲಕ ಸಾರ್ವಜನಿಕರಿಗೆ ನೇರವಾಗಿ ತಲುಪುವಂತೆ ಎನ್.ಐ.ಸಿ. ಮೂಲಕ ಅಗತ್ಯ ಕ್ರಮ ಕೈಗೊಳ್ಳ ಲಾಗಿದೆ. ಕಾರ್ಯಕ್ರಮದ ಲಿಂಕ್‌ನ್ನು ಸಾಕಷ್ಟು ಮುಂಚಿತವಾಗಿ ಸಾರ್ವಜನಿಕರಿಗೆ ನೀಡುವಂತೆ ಡಿಸಿ ಅಧಿಕಾರಿಗಳಿಗೆ ಆದೇಶ ನೀಡಿದರು.
ಕೋವಿಡ್ ವಿರುದ್ಧ ಹೋರಾಟದಲ್ಲಿ ಗಮನಾರ್ಹ ಸಾಧನೆ ತೋರಿದ ಕೋವಿಡ್ ವಾರಿಯರ್‌ಗಳನ್ನು ಸಮ್ಮಾನಿಸಲಾಗುತ್ತದೆ. ಜತೆಗೆ ಕೋವಿಡ್‌ನಿಂದ ಗುಣಮುಖರಾದ ಆಯ್ದ ಕೆಲವು ಮಂದಿಗೆ ಸ್ವಾತಂತ್ರ್ಯೋತ್ಸವ ಕಾರ್ಯ ಕ್ರಮಕ್ಕೆ ವಿಶೇಷ ಆಹ್ವಾನ ನೀಡುವಂತೆ ಹಾಗೂ ಜತೆಗೆ ಜಿಲ್ಲೆಯ ಎಲ್ಲ ಸರಕಾರಿ ಕಚೇರಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸುವಂತೆ ಡಿಸಿ ತಿಳಿಸಿದರು. ಪೊಲೀಸ್, ಹೋಂಗಾರ್ಡ್, ಕರಾವಳಿ ಕಾವಲು ಪಡೆ, ಅರಣ್ಯ ಇಲಾಖೆಯಿಂದ ಪಥ ಸಂಚಲನ ನಡೆಸುವಂತೆ ಹಾಗೂ ಕಾರ್ಯಕ್ರಮ ದಲ್ಲಿ ಕೋವಿಡ್-19 ಸುಕ್ಷಾ ನಿಯಮಗಳ ಉಲ್ಲಂಘನೆಯಾಗದಂತೆ ಎಲ್ಲ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದರು. ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ವಿವಿಧ ಅಧಿಕಾರಿಗಳನ್ನೊಳಗೊಂಡ ಸಮಿತಿಗಳನ್ನು ರಚಿಸಿ, ಜವಾಬ್ದಾರಿ ಹಂಚಿಕೆ ಮಾಡಲಾಯಿತು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರ ಚಂದ್ರ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನ್ಕರ್ ಮತ್ತಿತರರು ಉಪಸ್ಥಿತರಿದ್ದರು.