Advertisement

ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್‌ ಪೋರ್ಟಲ್‌

11:08 PM Aug 03, 2019 | Lakshmi GovindaRaj |

ಬೆಂಗಳೂರು: ರಾಜ್ಯದ ಎಲ್ಲ ಎಂಜಿನಿಯರಿಂಗ್‌ ಮತ್ತು ಪಾಲಿಟೆಕ್ನಿಕ್‌ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಪೋರ್ಟಲ್‌ ಮೂಲಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸ್ವೀಕರಿಸುವ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಎಂಜಿನಿಯರಿಂಗ್‌ ಕಾಲೇಜು, ವಿಶ್ವವಿದ್ಯಾಲಯ, ಪಾಲಿಟೆಕ್ನಿಕ್‌ ಸಂಸ್ಥೆಗಳಲ್ಲಿ ಪ್ರಸಕ್ತ ಸಾಲಿನಿಂದಲೇ ವಿವಿಧ ಯೋಜನೆಗಳಡಿಯಲ್ಲಿ ವಿದ್ಯಾರ್ಥಿವೇತನ ಅಥವಾ ಶುಲ್ಕ ವಿನಾಯ್ತಿಗೆ ಅರ್ಜಿ ಸಲ್ಲಿಸಲು ಒಂದೇ ಪೋರ್ಟಲ್‌ ಅಡಿಯಲ್ಲಿ ಆನ್‌ಲೈನ್‌ ಮುಖಾಂತರ ಅನುಷ್ಠಾನಗೊಳಿಸಲು ತಾಂತ್ರಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ.

Advertisement

ಸರ್ಕಾರದಿಂದ ಸೌಲಭ್ಯವನ್ನು ಒಂದೇ ಪೋರ್ಟಲ್‌ ಮೂಲಕ ವಿದ್ಯಾರ್ಥಿಗಳಿಗೆ ನೇರವಾಗಿ ಒದಗಿಸುವ ಉದ್ದೇಶದಿಂದ ಇದನ್ನು ಜಾರಿಗೆ ತರಲಾಗುತ್ತಿದೆ. ಶಿಕ್ಷಣ ಸಂಸ್ಥೆಗಳನ್ನು ಆನ್‌ಲೈನ್‌ ಮೂಲಕವೇ ದೃಢೀಕರಿಸುವ ಕೆಲಸವೂ ನಡೆಯುತ್ತಿದೆ. ಎಲ್ಲ ರೀತಿಯ ವಿದ್ಯಾರ್ಥಿ ವೇತನಕ್ಕೂ ಈ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದೆ. ನಕಲಿ ತಪ್ಪಿಸಲು ಇದು ಸಹಕಾರಿಯಾಗಲಿದೆ ಎಂದು ಇಲಾಖೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next