ಕೊಪ್ಪಳ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅಖೀಲ ಭಾರತ ಶಿಕ್ಷಣ ಉಳಿಸಿ ಸಮಿತಿ ಆನ್ ಲೈನ್ ಪ್ರತಿಭಟನೆ ನಡೆಸಿ, ಸರ್ಕಾರದ ಗಮನ ಸೆಳೆಯಿತು. ದೇಶವ್ಯಾಪಿ ಲಾಕ್‌ಡೌನ್ ಘೋಷಣೆಯಾದಾಗ ದೇಶದ ಜನರು ಬೆಂಬಲಿಸಿದ್ದಾರೆ. ಶಿಕ್ಷಕರು, ಅತಿಥಿ ಉಪನ್ಯಾಸಕರು, ವೃತ್ತಿಪರ ಕಾಲೇಜುಗಳ ಬೋಧಕರು, ಬೋಧಕೇತರ ಸಿಬ್ಬಂದಿ, ಸಾಮಾಜಿಕ ಕಲ್ಯಾಣಕ್ಕೆ ಸಂಬಂಧಿಸಿದ ಎಲ್ಲ ವಿಷಯಗಳ ಕುರಿತು ಜಾಗೃತಿ ಮೂಡಿಸಲು ಯಾವಾಗಲೂ ಮುಂಚೂಣಿಯಲ್ಲಿದ್ದಾರೆ. ಸರ್ಕಾರ ಅವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ಆನ್ ಲೈನ್ ಪ್ರತಿಭಟನೆ ನಡೆಸಿತು. ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು, ಅತಿಥಿ ಉಪನ್ಯಾಸಕರಾದ ರಮೇಶ, ವಿದ್ಯಾರ್ಥಿ ಸಂಘಟಕರಾದ ಮೌಲಾಸಾಬ್ ರಮೇಶ ವಂಕಲಕುಂಟಿ, ಶರಣು ಗಡ್ಡಿ ಭಾಗವಹಿಸಿದ್ದರು.ಕೊಪ್ಪಳ: ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಅಖೀಲ ಭಾರತ ಶಿಕ್ಷಣ ಉಳಿಸಿ ಸಮಿತಿ ಆನ್ ಲೈನ್ ಪ್ರತಿಭಟನೆ ನಡೆಸಿ, ಸರ್ಕಾರದ ಗಮನ ಸೆಳೆಯಿತು.