Advertisement
ಇದಕ್ಕಾಗಿ ಆನ್‌ಲೈನ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ, ಕೇವಲ ನಾಲ್ಕು ಹಂತಗಳಲ್ಲಿ 15ರಿಂದ 17 ದಿನಗಳಲ್ಲಿ ನಿರಾಕ್ಷೇಪಣ ಪತ್ರ (ಎನ್‌ಒಸಿ) ಪಡೆಯುವ ವ್ಯವಸ್ಥೆ ಪರಿಚಯಿಸಿದೆ.ಇದರಡಿ ರಾಜ್ಯದ ಖಾಸಗಿ ಪೂರ್ವ ಪ್ರಾಥಮಿಕ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಆರಂಭಿಸಲು ನೋಂದಣಿ/ಅನುಮತಿ, ಪ್ರಥಮ ಮಾನ್ಯತೆ, ಮಾನ್ಯತೆ ನವೀಕರಣ ಮತ್ತು ಕೇಂದ್ರ ಪಠ್ಯಕ್ರಮ ಸಂಯೋಜನೆ ಸೇವೆಗಳು ಆನ್‌ಲೈನ್‌ನಲ್ಲೇ ಲಭ್ಯವಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ. ಸಿ. ನಾಗೇಶ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
Related Articles
ಬೆಂಗಳೂರು: ರಾಜ್ಯದ ಅನಧಿಕೃತ ಶಾಲೆಗಳ ಪಟ್ಟಿಯನ್ನು ಸಿದ್ಧಪಡಿಸಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪರೀಕ್ಷೆಗಳು ಮುಗಿಯುತ್ತಿದ್ದಂತೆ ಆ ಅನಧಿಕೃತ ಶಾಲೆಗಳ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಲಿದೆ.
ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾತನಾಡಿ, ರಾಜ್ಯದ ಎಲ್ಲ ಜಿಲ್ಲೆಗಳ ಅನಧಿಕೃತ ಶಾಲೆಗಳ ಪಟ್ಟಿಯನ್ನು ಅಧಿಕಾರಿಗಳು ಸಿದ್ಧಪಡಿಸಿದ್ದಾರೆ. ಆದರೆ, ಸದ್ಯ ಪರೀಕ್ಷೆಗಳು ಆರಂಭವಾಗುತ್ತಿವೆ. ಈ ಸಂದರ್ಭದಲ್ಲಿ ಅಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವುದರಿಂದ ಮಕ್ಕಳಿಗೆ ಸಮಸ್ಯೆಯಾಗಬಹುದು. ಹಾಗಾಗಿ ಪರೀಕ್ಷೆಗಳು ಮುಗಿದ ಬಳಿಕ ಆ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈ ವೇಳೆ ಮಕ್ಕಳ ಭವಿಷ್ಯಕ್ಕೆ ಸಮಸ್ಯೆಯಾಗದಂತೆ ಎಚ್ಚರಿಕೆಯನ್ನೂ ವಹಿಸಲಾಗುವುದು. ಅಲ್ಲದೆ, 2023-24ನೇ ಶೈಕ್ಷಣಿಕ ವರ್ಷದಿಂದ ಜಿಲ್ಲಾವಾರು ಅನಧಿಕೃತ ಶಾಲೆಗಳ ಪಟ್ಟಿಯನ್ನು ಇಲಾಖೆ ವೆಬ್‌ಸೈಟ್‌ನಲ್ಲೇ ಪ್ರಕಟಿಸಲಾಗುವುದು ಎಂದು ಹೇಳಿದರು.
Advertisement