Advertisement
ಗುರುವಾರ ಸಂಜೆಯಿಂದಲೇ ಯರೇಹಳ್ಳಿ ಗ್ರಾಮಸ್ಥರು ಮತದಾನ ಮಾಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಶುಕ್ರವಾರ ಬೆಳಗ್ಗಿನಿಂದ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಮತದಾನ ಮಾಡುವಂತೆ ಮನವೊಲಿಸುವ ಪ್ರಯತ್ನ ಮಾಡಿದ್ದರು. ಮಧ್ಯಾಹ್ನ 2 ಗಂಟೆಗೆ ಜಿಪಂ ಸಿಇಒ ಎಸ್.ಜೆ. ಸೋಮಶೇಖರ್ ಹಾಗೂ ಉಪವಿಭಾಗಾ ಧಿಕಾರಿ ಕಾರ್ತಿಕ್ ಗ್ರಾಮಕ್ಕೆ ತೆರಳಿ ಗ್ರಾಮದ ಸಮಸ್ಯೆಗಳಿಗೆ ಸ್ಪಂದಿಸಿ ಮತದಾನ ಮಾಡುವಂತೆ ಮನವೊಲಿಸಿದ್ದರು.
ಯರೇಹಳ್ಳಿಗೆ ಇಂದಿಗೂ ಮೊಬೈಲ್ ನೆಟ್‌ವರ್ಕ್ ಸಿಗುವುದಿಲ್ಲ. ವಿದ್ಯುತ್ ಕೂಡ ಸಮರ್ಪಕವಾಗಿಲ್ಲ ಎಂಬುದು ಗ್ರಾಮಸ್ಥರ ದೂರು.