ಮೈಸೂರು: ಮೈಸೂರು-ಚಾಮರಾಜನಗರ ಜಿಲ್ಲಾಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಪಕ್ಷದಿಂದ ಒಬ್ಬರೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ಕಾಂಗ್ರೆಸ್ ನಿರ್ಧರಿಸಿದೆ.
ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ರಾತ್ರಿ ಇಲ್ಲಿನ ಖಾಸಗಿ ಹೋಟೆಲ್ ವೊಂದರಲ್ಲಿಕರೆದಿದ್ದ ಎರಡೂ ಜಿಲ್ಲೆಗಳ ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು ಹಾಗೂ ಪ್ರಮುಖ ನಾಯಕರ ಸಭೆಯಲ್ಲಿಈ ಕುರಿತು ತೀರ್ಮಾನಿಸಲಾಗಿದೆ.
ಇದನ್ನೂ ಓದಿ:ರೈತ ಕಾಯ್ದೆಗಳ ಹಿಂದೆಗೆತ ಚುನಾವಣ ತಂತ್ರವಾಗದಿರಲಿ
ಮೈಸೂರು-ಚಾಮರಾಜನಗರ ಕ್ಷೇತ್ರವು ದ್ವಿಸದಸ್ಯ ಕ್ಷೇತ್ರವಾಗಿದೆ. ಕಳೆದ ಅನೇಕ ವರ್ಷಗಳಿಂದ ಕಾಂಗ್ರೆಸ್ ಒಬ್ಬರೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತಿದೆ. ಪಕ್ಷಕ್ಕಿರುವ ಬಲವನ್ನು ಆಧರಿಸಿ ಕಾಂಗ್ರೆಸ್ ಇಂತಹ ನಡೆಯನ್ನು ಅನುಸರಿಸಿದೆ. ಈ ಬಾರಿಯೂ ಒಬ್ಬರೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದು ಸೂಕ್ತ. ಪಕ್ಷದಿಂದ ಇಬ್ಬರು ಅಭ್ಯರ್ಥಿಗಳು ಕಣಕ್ಕೆ ಇಳಿದರೆ ಎರಡೂ ಸ್ಥಾನಗಳಲ್ಲಿ ಗೆಲುವು ಕಷ್ಟವಿದೆ ಎಂದು ಒಬ್ಬ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ಸಭೆ ತೀರ್ಮಾನಿಸಿತು.
ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಒಬ್ಬರೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿನಿರ್ಧರಿಸಲಾಗಿದೆ ಎಂದು ಕೃಷ್ಣರಾಜ ಕ್ಷೇತ್ರದ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ‘ಉದಯವಾಣಿ’ಗೆ ತಿಳಿಸಿದರು.