Advertisement

ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ

08:24 PM Dec 16, 2024 | Team Udayavani |

ಸುವರ್ಣ ವಿಧಾನಸೌಧ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ(ಕೆಕೆಆರ್‌ಡಿಬಿ)ಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ ಕಲ್ಪಿಸಿರುವ ಬಗ್ಗೆ ಚರ್ಚಿಸಿ, ಸಮಸ್ಯೆ ಬಗೆಹರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದರು.

Advertisement

ವಿಧಾನಸಭೆಯಲ್ಲಿ ಸೋಮವಾರ ಉತ್ತರ ಕರ್ನಾಟಕ ಸಮಸ್ಯೆ ಮೇಲಿನ ಚರ್ಚೆ ವೇಳೆ ಜೆಡಿಎಸ್‌ನ ನೇಮರಾಜ ನಾಯಕ್‌, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ ನಿರ್ದೇಶಕರು/ ಸದಸ್ಯರು ಬರೀ ಕಾಂಗ್ರೆಸ್‌ನ ವ ರೇ ಇದ್ದಾರೆ. ಪ್ರತಿಪಕ್ಷಗಳಿಗೆ ಅವಕಾಶವನ್ನೇ ನೀಡಿಲ್ಲ ಎಂದು ಬೇಸರ ಹೊರಹಾಕಿದರು.

ಅದಕ್ಕೆ ಶರಣು ಸಲಗಾರ, ಮಾನಪ್ಪ ವಜ್ಜಲ್‌ ಮತ್ತಿತರರು ದನಿಗೂಡಿಸಿದರು. ಆಗ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್‌, “ಈ ಬಗ್ಗೆ ಚರ್ಚೆ ಮಾಡಿ ಸಮಸ್ಯೆ ಪರಿಹರಿಸಲಾಗುವುದು’ ಎಂದು ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next