Advertisement

ಶಿಕ್ಷಣದಿಂದ ಮಾತ್ರ ಜ್ಞಾನವಂತರಾಗಲು ಸಾಧ್ಯ: ಹರೀಶ್‌

03:10 PM Jun 07, 2017 | Team Udayavani |

ಮಡಿಕೇರಿ: ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣ ನೀಡುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಲು ಪ್ರತಿಯೊಬ್ಬರು ಪ್ರಯತ್ನ ಪಡಬೇಕೆಂದು ಮುಳ್ಳುಸೋಗೆ ಗ್ರಾ.ಪಂ. ಸದಸ್ಯರಾದ ಹರೀಶ್‌ ಸಲಹೆ ನೀಡಿದ್ದಾರೆ. 
ಗೊಂದಿಬಸವನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾದ ಶಾಲಾ ದಾಖಲಾತಿ ಆಂದೋಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಇಂದು ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡುತ್ತಿದೆ. 

Advertisement

ಜೊತೆಗೆ ಸರಕಾರಿ ಶಾಲೆಯಲ್ಲಿ ಓದು ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡಲು ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಶೂ, ಬಿಸಿಯೂಟದಂತಹ ಯೋಜನೆಗಳು ಹಳ್ಳಿಯ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗುತ್ತಿದೆ ಎಂದರು. 

ಹಳ್ಳಿಯ ಮಕ್ಕಳಲ್ಲಿ ಪ್ರತಿಭೆಗಳು ಅಡಗಿರುತ್ತದೆ. ಗ್ರಾಮೀಣ ಭಾಗದ ಮಕ್ಕಳೇ ಇಂದು ಸಹ ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ ಎಂದು ಅವರು ಪ್ರಶಂಸೆ ವ್ಯಕ್ತ ಪಡಿಸಿದರು.                                                              

ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕಿ ಎಸ್‌.ಕೆ. ಜಲಜಾಕ್ಷಿ ಅವರು ತಮ್ಮ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಆ ಮೂಲಕ ಸರ್ಕಾರ ನೀಡುತ್ತಿರುವ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಳ್ಳ ಬೇಕು ಎಂದರು. 
ಇದೇ ಸಂದರ್ಭದಲ್ಲಿ ದಾಖಲಾತಿ ಆಂದೋ ಲನದ ಅಂಗವಾಗಿ ಗ್ರಾಮದ ಮುಖ್ಯ ಬೀದಿಗಳಲ್ಲಿ ಜಾಥಾವನ್ನು ನಡೆಸಿ ಶಾಲೆಗೆ ಮಕ್ಕಳನ್ನು ಸೇರಿಸುವಂತೆ ಪೋಷಕರಲ್ಲಿ ಮನವಿ ಮಾಡಿಕೊಳ್ಳಲಾಯಿತು. 

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರುಗಳಾದ ಪುಷ್ಪ, ಶೋಭ, ಯಮುನ, ಸುನಂದ, ಶಾರದ, ಮುಖ್ಯ ಶಿಕ್ಷಕಿ ಜಲಜಾಕ್ಷಿ ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next