Advertisement

ತುರ್ತು ಪ್ರಕರಣ ಮಾತ್ರ ಹೈಕೋರ್ಟಿನಲ್ಲಿ

11:19 PM Mar 15, 2020 | Lakshmi GovindaRaj |

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೋರ್ಟ್‌ ಕಲಾಪಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ಮುಂಜಾಗ್ರತಾ ಮಾರ್ಗಸೂಚಿ ಹೊರಡಿಸಿದೆ.

Advertisement

ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ಅವರ ನಿರ್ದೇಶನದಂತೆ ಹೈಕೋರ್ಟ್‌ನ ಬೆಂಗಳೂರು ಪ್ರಧಾನಪೀಠ, ಧಾರವಾಡ ಮತ್ತು ಕಲಬುರಗಿ ಪೀಠ ಸೇರಿ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಿಗೆ ಅನ್ವಯವಾಗುವಂತೆ ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ ರಾಜೇಂದ್ರ ಬಾದಾಮಿಕರ್‌ ಭಾನುವಾರ ಅಧಿಸೂಚನೆ ಹೊರಡಿಸಿದ್ದಾರೆ.

ಅದರಂತೆ ಹೈಕೋರ್ಟ್‌ ಹಾಗೂ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಲ್ಲಿ ಸೋಮವಾರದಿಂದ ತುರ್ತು ಪ್ರಕರಣಗಳನ್ನು ಮಾತ್ರ ವಿಚಾರಣೆ ನಡೆಸಲಾಗುವುದು. ಕಕ್ಷಿದಾರರು ಹಾಗೂ ವಕೀಲರು ಒಪ್ಪಿದ ಪ್ರಕರಣಗಳನ್ನು ವಿಚಾರಣೆಗೆ ಪರಿಗಣಿಸಲಾಗುವುದು.

ತುರ್ತು ಪ್ರಕರಣಗಳಲ್ಲಷ್ಟೇ ಸಾಕ್ಷ್ಯ ವಿಚಾರಣೆ ನಡೆಸಲಾಗುವುದು. ವಿಡಿಯೋ ಕಾನ್ಫರೆನ್ಸ್‌ ಮೂಲಕ ವಿಚಾರಣೆಗೆ ಆದ್ಯತೆ ನೀಡಲಾಗುವುದು. ವಕೀಲರನ್ನು ಹೊರತುಪಡಿಸಿ ಹೈಕೋರ್ಟ್‌ ಸಿಬ್ಬಂದಿ ಸೇರಿ ಹೈಕೋರ್ಟ್‌ಗೆ ಭೇಟಿ ನೀಡುವ ಪ್ರತಿಯೊಬ್ಬರನ್ನೂ ಥರ್ಮಲ್‌ ಸ್ಕ್ರೀನಿಂಗ್‌ಗೆ ಒಳಪಡಿಸಲಾಗುವುದು. ಈ ವಿಚಾರದಲ್ಲಿ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಲ್ಲೂ ಮುನ್ನೆಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next