ಹೊಸದಿಲ್ಲಿ: ಇನ್ನು ಮುಂದೆ ವಿಮಾನದಲ್ಲಿ ಪ್ರಯಾಣಿಸುವವರು ಕೇವಲ 1 ಬ್ಯಾಗ್ ಮಾತ್ರ ಕ್ಯಾಬಿನ್ ಒಳಗೆ ಕೊಂಡೊಯ್ಯಲು ಅವಕಾಶವಿದೆ.
ಅದು ಸಹ 7 ಕೆ.ಜಿ. ಮೀರಿ ರಬಾರದು. ಅಲ್ಲದೆ ಬ್ಯಾಗ್ 115 ಸೆಂ.ಮೀ.ಗಿಂತ ಹೆಚ್ಚಿರಬಾರದು ಎಂದು ನಾಗರಿಕ ವಿಮಾನ ಯಾನ ಭದ್ರತಾ ಬ್ಯೂರೋ ಹೇಳಿದೆ.
ಇತ್ತೀಚಿನ ದಿನಗಳಲ್ಲಿ ವಿಮಾನ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸುರಕ್ಷ ಕ್ರಮಗಳನ್ನು ಕೈಗೊಳ್ಳಲು ಕೇಂದ್ರೀಯ ಕೈಗಾರಿಕ ಭದ್ರತಾ ದಳ ಈ ನಿರ್ಧಾರಕ್ಕೆ ಸೂಚಿಸಿತ್ತು ಎನ್ನಲಾಗಿದೆ.
ಹೀಗಾಗಿ ಕೇವಲ 1 ಬ್ಯಾಗ್ ಅಷ್ಟೇ ಕೊಂಡೊಯ್ಯಲು ಅವಕಾಶ ನೀಡಲಾಗಿದೆ. ಫಸ್ಟ್ ಅಥವಾ ಬ್ಯುಸಿನೆಸ್ ಕ್ಲಾಸ್‌ನಲ್ಲಿ ಪ್ರಯಾಣಿಸು ವವರು 10 ಕೆ.ಜಿ. ವರೆಗೆ ಕೊಂಡೊಯ್ಯಬಹುದು. ಈ ಹೊಸ ನಿಯಮ ಈ ವರ್ಷ ಮೇ 29ಕ್ಕಿಂತ ಮೊದಲ ಟಿಕೆಟ್ ಬುಕ್ ಮಾಡಿದವರಿಗೆ ಅನ್ವಯಿಸುವುದಿಲ್ಲ.