Advertisement
ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಏರ್ಪಡಿಸಿದ್ದ ಔತಣಕೂಟದಲ್ಲಿ ಭಾಗವಹಿಸಿದ್ದ ಉಸ್ತುವಾರಿ ಸಚಿವರು, ಪಕ್ಷದ ಹಿರಿಯ ನಾಯಕರೊಂದಿಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಸುದೀರ್ಘ ಚರ್ಚೆ ನಡೆಯಿತು. ಈ ವೇಳೆ 12ರಿಂದ 15 ಲೋಕಸಭಾ ಕ್ಷೇತ್ರಗಳಲ್ಲಿ ತಲಾ ಓರ್ವ ಅಭ್ಯರ್ಥಿಯ ಹೆಸರನ್ನು ಮಾತ್ರ ಶಿಫಾರಸು ಮಾಡುವ ಬಗ್ಗೆ ಪ್ರಸ್ತಾವವಾಗಿದೆ.ಹೈಕಮಾಂಡ್ ಸೂಚನೆಯಂತೆ ಆದಷ್ಟು ಬೇಗ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಬೇಕು. ಸಾಧ್ಯವಾದರೆ 2-3 ದಿನಗಳಲ್ಲಿ ಉಸ್ತುವಾರಿ ಸಚಿವರು ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಳಿಸಿ ತಮಗೆ ನೀಡಬೇಕು ಎಂದು ಸೂಚಿಸಿರುವ ನಾಯಕರು, ಎರಡು-ಮೂರು ಹೆಸರುಗಳ ಬದಲಿಗೆ ತಲಾ ಒಂದು ಹೆಸರನ್ನು ಶಿಫಾ ರಸು ಮಾಡಲು ಉದ್ದೇಶಿಸಲಾಗಿದೆ.