Advertisement

ನೋಂದಣಿಯಾದ ಹೋಂಸ್ಟೇಗಳಿಗೆ ಮಾತ್ರ ಅವಕಾಶ: ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌

01:34 AM Jun 11, 2020 | Sriram |

ಮಡಿಕೇರಿ: ಎರಡೂವರೆ ತಿಂಗಳುಗಳಿಂದ ಮುಚ್ಚಿದ್ದ ಹೊಟೇಲ್‌, ರೆಸ್ಟೋರೆಂಟ್‌, ಹೋಂ ಸ್ಟೇ ಆರಂಭಕ್ಕೆ ಸರಕಾರ ಅವಕಾಶ ನೀಡಿದ್ದು, ಅದರಂತೆ ಜಿಲ್ಲೆಯಲ್ಲಿ ಅಧಿಕೃತವಾಗಿ ನೋಂದಣಿಯಾದ 800 ಹೋಂ ಸ್ಟೇಗಳಿಗೆ ಮಾತ್ರ ಪುನರಾರಂಭಕ್ಕೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ತಿಳಿಸಿದ್ದಾರೆ.

Advertisement

ನಗರದ ಜಿ.ಪಂ. ಸಭಾಂಗಣದಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಪ್ರಮುಖ ರೊಂದಿಗೆ ಸರಕಾರದ ಮಾರ್ಗಸೂಚಿ ಪಾಲನೆ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹೋಂಸ್ಟೇಗಳು ಸರಕಾರದ ನಿರ್ದೇಶನಗಳನ್ನು ಚಾಚೂ ತಪ್ಪದೆ ಪಾಲಿಸಬೇಕು, ಸ್ವತ್ಛತೆ ಕಾಪಾಡಿಕೊಳ್ಳಬೇಕು. ಸ್ಯಾನಿ ಟೈಸರ್‌ ಇಡಬೇಕು, ಮಾಸ್ಕ್ ಧರಿಸಬೇಕು, ಥರ್ಮಲ್‌ ಸ್ಕ್ಯಾನರ್‌ನಿಂದ ಪರೀಕ್ಷಿಸಬೇಕು. ಅಂತರ ಕಾಯ್ದುಕೊಳ್ಳಬೇಕು. ಪ್ರವಾಸಿಗರ ಸಂಪೂರ್ಣ ವಿವರ ಇರಬೇಕು ಎಂದು ಅವರು ಹೇಳಿದರು.

ಹೋಂ ಸ್ಟೇ,ರೆಸಾರ್ಟ್‌ ಮಾಲಕರ ಜವಾಬ್ದಾರಿ ಹೆಚ್ಚಿದೆ. ರೆಸಾರ್ಟ್‌ಗಳಲ್ಲಿ ಸಭೆ ಸಮಾರಂಭ, ಪಾರ್ಟಿ ಮಾಡುವುದಕ್ಕೆ ಅವಕಾಶವಿಲ್ಲ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಪಿ. ಸುಮನ್‌ ಮಾತನಾಡಿ, ಪ್ರವಾಸಿಗರ ಆಗಮನ, ನಿರ್ಗಮನ, ಸಮಯ, ದಿನಾಂಕದ ನಿಖರ ಮಾಹಿತಿ ಒದಗಿಸಬೇಕು. ಸರಕಾರದ ನಿರ್ದೇಶನವನ್ನು ಪಾಲಿಸಬೇಕು ಎಂದರು.

Advertisement

ಪ್ರವಾಸಿಗರಿಗೆ ರಕ್ಷಣೆ ನೀಡಿ
ಹೋಂಸ್ಟೇ ಅಸೋಷಿಯೇಶನ್‌ ಅಧ್ಯಕ್ಷ ಬಿ.ಜಿ. ಅನಂತ ಶಯನ ಮಾತನಾಡಿ, ಪ್ರವಾಸಿಗರಿಗೆ ರಕ್ಷಣೆ ನೀಡಬೇಕು. ಯಾವುದೇ ಕಾರಣಕ್ಕೂ ಕಿರಿಕಿರಿ ಉಂಟಾಗಬಾರದು. ನೋಂದಣಿ ಹೋಂ ಸ್ಟೇಗಳಿಗೆ ರಕ್ಷಣೆ ನೀಡಬೇಕು ಎಂದರು.

ರೆಸಾರ್ಟ್‌ ಅಸೋಸಿಯೇಶನ್‌ ಗೌರವ ಸಲಹೆಗಾರರಾದ ಜಿ. ಚಿದ್ವಿಲಾಸ್‌ ಮಾತನಾಡಿ, ಜಿಲ್ಲೆಯ ಪ್ರವಾಸಿ ತಾಣಗಳಿಗೆ ಸಾರ್ವಜನಿಕರಿಗೆ ಅವಕಾಶ ನೀಡುವಂತಾಗಬೇಕು ಎಂದು ಮನವಿ ಮಾಡಿದರು.ಹೆಚ್ಚುವರಿ ಜಿಲ್ಲಾಧಿಕಾರಿ ಡಾ| ಸ್ನೇಹಾ ಸಹಿತ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next