Advertisement

ಶಿಕ್ಷಣದಿಂದಷ್ಟೇ ಅನಿಷ್ಠ ಪದ್ಧತಿ ನಿರ್ಮೂಲನೆ ಸಾಧ್ಯ

01:41 PM Jun 13, 2018 | Team Udayavani |

ಬೀದರ: ಇಂದಿಗೂ ಮಕ್ಕಳನ್ನು ದುಡಿಮೆಗೆ ಸೇರಿಸುತ್ತಿರುವುದು ಕಂಡುಬರುತ್ತಿದೆ. ಈ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸುವ ಅಗತ್ಯವಿದ್ದು, ಶಿಕ್ಷಣದಿಂದ ಮಾತ್ರ ಈ ಅನಿಷ್ಠ ಪದ್ಧತಿ ನಿರ್ಮೂಲನೆ ಮಾಡಲು ಸಾಧ್ಯವಿದೆ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಚಂದ್ರಶೇಖರ ರೆಡ್ಡಿ ಹೇಳಿದರು.

Advertisement

ನಗರದ ಜಿಲ್ಲಾ ರಂಗಮಂದಿರದಲ್ಲಿ ಮಂಗಳವಾರ ನಡೆದ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಭವಿಷ್ಯಕ್ಕೆ ಮಾರಕವಾಗಿರುವ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದು ಹೇಳಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಹರಿ ದೇಶಪಾಂಡೆ ಮಾತನಾಡಿ, ಬಾಲ ಕಾರ್ಮಿಕ ಪದ್ಧತಿಯಿಂದಾಗಿ ಹಲವು ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದು, ಪಾಲಕರು ತಮ್ಮ ಮಕ್ಕಳಿಗೆಸಂವಿಧಾನಾತ್ಮಕವಾದ ಶಿಕ್ಷಣದ ಹಕ್ಕನ್ನು 
ನೀಡಲು ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದರು.

ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಕವಿತಾ ಹುಷಾರೆ ಮಾತನಾಡಿ, ಮಗು ಅಪಾಯದಲ್ಲಿರುವುದು ಕಂಡುಬಂದಲ್ಲಿ
1098ಗೆ ಕರೆ ಮಾಡಿ ಮಾಹಿತಿ ನೀಡಬೇಕು. ಮಕ್ಕಳಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಬಂದರೆ ಅಂತಹ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಪರಿಹರಿಸಲಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಸಲಹಾ ಸಮಿತಿಯ ಸದಸ್ಯ ಅಮೃತರಾವ್‌ ಚಿಮಕೋಡೆ, ಬೀದರ ನಗರಸಭೆ ಪೌರಾಯುಕ್ತ ಮನೋಹರ, ಡಾನ್‌ಬೊಸ್ಕೋ ಸಂಸ್ಥೆಯ ಮಕ್ಕಳ ಸಹಾಯವಾಣಿ ಕೇಂದ್ರದ ನಿರ್ದೇಶಕ ಫಾದರ್‌ ಜೇಮ್ಸ್‌ ಮಾತನಾಡಿದರು. ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾ ಧೀಶ ಜೀವನರಾವ್‌ ಕುಲಕರ್ಣಿ, ಸಹಾಯಕ ಆಯುಕ್ತರಾದ ಎಸ್‌.ಎನ್‌. ಬಾಲಚಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಈರಣ್ಣಾ ಪಾಂಚಾಳ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಉಮೇಶ ಎಸ್‌.ಸಿರಹಟ್ಟಿಮಠ, ಎಂ.ಎಸ್‌. ಕಟಗಿ,
ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷ ಪಂಡರಿ ಪೂಜಾರಿ, ಅರ್ಜುನ ಸಿತಾಳಗೇರಾ, ಗೌರಿಶಂಕರ ಪರ್ತಾಪುರೆ, ಸುಧಾಕರ ಎಲ್ಲಾನೋರ ಹಾಗೂ ಇತರರು ಇದ್ದರು.

Advertisement

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮಕ್ಕಳ ಸಹಾಯವಾಣಿ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next