Advertisement
ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಎರಡೂವರೆ ತಿಂಗಳ ನಿಷೇಧ ಹೊರತುಪಡಿಸಿದರೆ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಮರಳುಗಾರಿಕೆಗೆ ಯಾವುದೇ ಅಡ್ಡಿ ಎದುರಾಗಿಲ್ಲ. ಈ ಕಾರಣಕ್ಕೆ ಜಿಲ್ಲೆಯಲ್ಲಿ ಮರಳು ಅಭಾವದ ಸಮಸ್ಯೆ ಅಷ್ಟೊಂದು ಕಂಡುಬಂದಿರಲಿಲ್ಲ. ಅದೇ ಕಳೆದ ವರ್ಷ ಸುಮಾರು ಆರು ತಿಂಗಳು ವಿಳಂಬವಾಗಿ ಮರಳುಗಾರಿಕೆ ನಡೆಸುವುದಕ್ಕೆ ಅನುಮತಿ ದೊರೆತಿದ್ದು, ಮರಳು ಲಭ್ಯತೆ ವಿಚಾರದಲ್ಲಿ ಸಾಕಷ್ಟು ತೊಂದರೆಯೂ ಆಗಿತ್ತು. ಜಿಲ್ಲೆಯಲ್ಲಿ
ಕಳೆದ ವರ್ಷ ಬ್ಯಾಥಮೆಟ್ರಿಕ್ ಸರ್ವೆಗಾಗಿ ಜಿಯೋ ಮೆರೈನ್ ಸೊಲ್ಯೂಶನ್ ಸಂಸ್ಥೆಗೆ ಗುತ್ತಿಗೆ ನೀಡಲಾಗಿತ್ತು. ಅದು ಸಲ್ಲಿಸಿದ ವರದಿಯನ್ನು ಜಿಲ್ಲಾಡಳಿತ ತಾಂತ್ರಿಕ ವರದಿಗಾಗಿ ಎನ್‌ಐಟಿಕೆಗೆ ನೀಡಿತ್ತು. ಪರಿಶೀಲನೆ ಬಳಿಕ ಎನ್‌ಐಟಿಕೆ ಅ. 11ರಂದು ನೀಡಿದ ವರದಿಯಲ್ಲಿ ನೇತ್ರಾವತಿ ಹಾಗೂ ಫಲ್ಗುಣಿ ನದಿಯ ಸಿಆರ್‌ಝಡ್ ವಲಯದಲ್ಲಿ 22 ಬ್ಲಾಕ್‌ಗಳಲ್ಲಿ ಮರಳು ತೆಗೆಯಬಹುದು ಎಂದು ಶಿಫಾರಸು ಮಾಡಿತ್ತು. ಈ ಆಧಾರದಲ್ಲಿ ಒಟ್ಟು 105 ಮಂದಿಗೆ ಸಿಆರ್‌ಝಡ್ ವಲಯದಲ್ಲಿ ಮರಳುಗಾರಿಕೆಗೆ ಅವಕಾಶ ನೀಡಲಾಗಿತ್ತು.
Related Articles
Advertisement
ಮರು ಸರ್ವೇಗೆ ಪೂರಕ ಸಿದ್ಧತೆಸಿಆರ್ಝಡ್ ವಲಯದಲ್ಲಿ ಮರಳುಗಾರಿಕೆ ಡಿಸೆಂಬರ್‌ನಲ್ಲಿ ಕೊನೆಗೊಳ್ಳಲಿದೆ. ಬಳಿಕ ಬ್ಯಾಥಮೆಟ್ರಿಕ್ ಸರ್ವೆ ನಡೆಸಿ ಮರಳು ದಿಬ್ಬಗಳನ್ನು ಗುರುತಿಸಿ ಸಂಬಂಧಪಟ್ಟ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಬಳಿಕ ಹೊಸದಾಗಿ ಈ ವಲಯದಲ್ಲಿ ಮರಳುಗಾರಿಕೆ ಪ್ರಾರಂಭಗೊಳ್ಳಲಿದೆ. ಪೂರಕ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.
– ಪದ್ಮಶ್ರೀ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕರು