ಚಿಕ್ಕಬಳ್ಳಾಪುರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ಡಿಸಿಸಿ ಬ್ಯಾಂಕ್‌ನಲ್ಲಿ ಖಾತೆ ತೆರೆಯಲು ನಾವೇ ವಿಫಲರಾಗಿದ್ದೇವೆ ಎಂದು ಡಿಸಿಸಿ ಬ್ಯಾಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡಕಳವಳ ವ್ಯಕ್ತಪಡಿಸಿದರು.
ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ನಾಗಮಂಗಲ ಗ್ರಾಮದಲ್ಲಿ ಮಳಮಾಚನಹಳ್ಳಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ ಹಾಗೂ 2019-20 ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಉಭಯ ಜಿಲ್ಲೆಯಲ್ಲಿ ರೈತರು ಮತ್ತು ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಲ ಸೌಲಭ್ಯ ನೀಡುತ್ತಿದ್ದೇವೆ.ಆದರೆ ಸಾಲಕ್ಕೆ ಡಿಸಿಸಿ ಬ್ಯಾಂಕ್ ಬೇಕು, ಠೇವಣಿ ಇಡಲು ಮಾತ್ರ ರಾಷ್ಟ್ರೀಕೃತ ಬ್ಯಾಂಕ್‌ಗಳು ಬೇಕು ಎನ್ನುವ ಧೋರಣೆಯನ್ನು ರೈತರು ಸೇರಿದಂತೆ ಹಾಲು ಉತ್ಪಾದಕರು ಬಿಡಬೇಕು ಎಂದು ಮನವಿ ಮಾಡಿದರು.
20 ಕೋಟಿ ಸಾಲ ನೀಡುತ್ತೇವೆ: ಜಿಲ್ಲೆಯಲ್ಲಿ ಮಳಮಾಚನಹಳ್ಳಿ ಎಸ್.ಎಫ್.ಸಿ.ಎಸ್ ಬ್ಯಾಂಕ್ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಇದರ ಮೂಲಕ ರೈತರು ಮತ್ತು ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಸೌಲಭ್ಯ ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಈ ಬ್ಯಾಂಕ್ ಮೂಲಕ 20 ಕೋಟಿ ರೂ. ಸಾಲ ನೀಡುವ ಯೋಜನೆ ರೂಪಿಸಿದ್ದೇವೆ ಎಂದರು.
ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎ.ನಾಗರಾಜ್ ಮಾತನಾಡಿದರು. ಈ ಸಂದರ್ಭದಲ್ಲಿ ಡಿಸಿಸಿಬ್ಯಾಂಕ್ ನಿರ್ದೇಶಕ ಹನುಮಂತರೆಡ್ಡಿ, ಮಳಮಾಚನಹಳ್ಳಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷ ಎನ್. ಮುನಿಯಪ್ಪ, ಉಪಾಧ್ಯಕ್ಷ ತಿಮ್ಮಯ್ಯ, ಕೋಚಿಮುಲ್ ನಿರ್ದೇಶಕ ಶ್ರೀನಿವಾಸ್ ರಾಮಯ್ಯ, ಮಳಮಾಚನಹಳ್ಳಿ ಎಸ್.ಎಫ್. ಸಿ.ಎಸ್ ಮಾಜಿ ಅಧ್ಯಕ್ಷ ಎನ್.ಸಿ.ನಾರಾಯಣ ಸ್ವಾಮಿ, ಮುನೇಗೌಡ, ಬೆಳ್ಳೂಟಿ ರಾಮಕೃಷ್ಣ, ನಾಗಮಂಗಲ ಗ್ರಾಪಂ ಉಪಾಧ್ಯಕ್ಷೆ ಆಂಜಿ ನಮ್ಮ, ಸದಸ್ಯ ತಮ್ಮಣ್ಣ,ಮಾಜಿಉಪಾಧ್ಯಕ್ಷಎನ್. ಡಿ.ನಾರಾಯಣಪ್ಪ, ಚನ °ಕೇಶವ, ಬಸವ ಪಟ್ಟಣ ಭೈರೇಗೌಡ,ಡಿಸಿಸಿಬ್ಯಾಂಕ್ ವ್ಯವ ಸ್ಥಾಪಕ ಎಸ್. ಆನಂದ್, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಚ್.ಎಂ.ಉಷಾರಾಣಿ, ಸಂಘದ ಆಡಳಿತ ಮಂಡಳಿ ಸದಸ್ಯರು ಹಾಜರಿದ್ದರು.