Advertisement
”ಪ್ರತಿ ಮತದಾರನಿಗೆ 6000 ರೂಪಾಯಿ ಲಂಚದ ಬಹಿರಂಗ ಆಮಿಷದ ಮೂಲಕ ರಾಜ್ಯದ 5 ಕೋಟಿ ಮತದಾರರನ್ನು 30 ಸಾವಿರ ಕೋಟಿ ರೂ. ಲಂಚದ ಮೂಲಕ ಖರೀದಿ ಮಾಡಲು ಸಂಚು ನಡೆಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ತನಿಖೆ ನಡೆಸಬೇಕು ಎಂದು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರಿಗೆ ಮಂಗಳವಾರ ಪಕ್ಷದ ಪ್ರಮುಖ ನಾಯಕರು ದೂರು ನೀಡಿದ್ದಾರೆ.
ದೂರು ದಾಖಲಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬೊಮ್ಮಾಯಿ, ಇದು ಅತ್ಯಂತ ಕೀಳು ಮಟ್ಟದ್ದು. ಹೇಳಿಕೆ ಕೊಟ್ಟವರು ಅದಕ್ಕೆ ಸ್ಪಷ್ಟೀಕರಣ ಕೊಡುತ್ತಾರೆ. ಮೊನ್ನೆ ದಿಗ್ವಿಜಯ ಸಿಂಗ್ ಅವರು ಒಂದು ಹೇಳಿಕೆ ಕೊಟ್ಟಿದ್ದಾರೆ. ನಿನ್ನೆ ರಾಹುಲ್ ಗಾಂಧಿ ಅವರು ಹೇಳಿಕೆ ನೀಡಿದ್ದು, ಯಾರಾದರೂ ಹೇಳಿಕೆ ನೀಡಿದರೆ. ಅದಕ್ಕೆ ಸರ್ಕಾರ ಜವಾಬ್ದಾರಿಯಲ್ಲ. ವೈಯಕ್ತಿಕವಾಗಿ ಅವರೇ ಜವಾಬ್ದಾರರು ಎಂದು ಸುಪ್ರೀಂಕೋರ್ಟ್ ತೀರ್ಪು ಕೂಡ ಬಂದಿದೆ. ಇದೆಲ್ಲ ಗೊತ್ತಿದ್ದು, ಕೇವಲ ರಾಜಕೀಯ ಕಾರಣಕ್ಕೆ, ಸೋಲು ಗ್ಯಾರಂಟಿಯಾಗಿರವ ಕಾರಣ ಸುಳ್ಳು ಹಾಗೂ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡಿ ಜನರ ದಾರಿ ತಪ್ಪಿಸುವ ಸಣ್ಣ ಪ್ರಯತ್ನ ಮಾಡುತ್ತಿದೆ. ಆದರೆ ಜನಕ್ಕೆ ಇದೆಲ್ಲಾ ಗೊತ್ತಿದೆ. ಮುಂದೆ ಇನ್ನೂ ಪ್ರಯತ್ನ ಮಾಡುತ್ತಾರೆ. ದೇಶದಲ್ಲಿ ಕಾನೂನಿದೆ. ಆ ಕಾನೂನಿನ ಪ್ರಕಾರ ಎಲ್ಲವೂ ನಡೆಯಲಿದೆ ಎಂದಿದ್ದಾರೆ.