Advertisement

ಉಡುಪಿ ಜಿಲ್ಲೆಯಲ್ಲೂ ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ಅಂಗಡಿಗಳಿಗೆ ಅವಕಾಶ

08:21 AM May 05, 2020 | Sriram |

ಉಡುಪಿ: ಉಡುಪಿ ಜಿಲ್ಲೆಯಲ್ಲೂ ಮದ್ಯದಂಗಡಿಗಳು ಹೊರತುಪಡಿಸಿದಂತೆ ಎಲ್ಲ ಅಂಗಡಿ ಮುಂಗಟ್ಟುಗಳು ನಾಳೆಯಿಂದ ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ತೆರೆದಿರುತ್ತವೆ.

Advertisement

ಈ ಸಂಬಂಧ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರು ಸೋಮವಾರ ಪರಿಷ್ಕೃತ ಆದೇಶವನ್ನು ಹೊರಡಿಸಿದ್ದಾರೆ. ಈ ಹಿಂದೆ ಚಾಲ್ತಿಯಲ್ಲಿದ್ದ ಬೆಳಗ್ಗೆ 7ರಿಂದ ಮಧ್ಯಾಹ್ನ 1 ರವರೆಗಿನ ಆದೇಶವನ್ನು ಪರಿಷ್ಕರಿಸಲಾಗಿದ್ದು, ಸಂಜೆ 7 ರವರೆಗೂ ಅಗತ್ಯ ವಸ್ತುಗಳೂ ಸೇರಿದಂತೆ ಎಲ್ಲ ತೆರನಾದ ಅಂಗಡಿ ಮುಂಗಟ್ಟುಗಳು ಕಾರ್ಯ ನಿರ್ವಹಿಸಬಹುದು. ಆದರೆ ಮದ್ಯದಂಗಡಿಗಳು ಬೆಳಗ್ಗೆ 9 ರಿಂದ ಸಂಜೆ 7 ರವರೆಗೆ ಕಾರ್ಯನಿರ್ವಹಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸೋಮವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗಿನ ಬೆಳವಣಿಗೆಗಳನ್ನು ಗಮನಿಸಿದ್ದು, ಎಲ್ಲ ಅಂಗಡಿಗಳಲ್ಲಿ ಜನದಟ್ಟಣೆ ಹೆಚ್ಚಿತ್ತು. ಈ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಕಾಪಾಡುವುದೂ ಕಷ್ಟವೆನಿಸಿದ್ದು, ಹಾಗಾಗಿ ಜನದಟ್ಟಣೆ ಕಡಿಮೆ ಮಾಡುವ ಸಲುವಾಗಿ ಹಾಗೂ ಸುರಕ್ಷಾ ಕ್ರಮಗಳನ್ನು ಪಾಲಿಸುವ ಸಲುವಾಗಿ ಅಂಗಡಿ ಮುಂಗಟ್ಟುಗಳ ಕಾರ್ಯ ನಿರ್ವಹಣಾ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ತಿಳಿಸಲಾಗಿದೆ.

ರಾತ್ರಿ 7ರಿಂದ ಸಂಜೆ 7 ರವರೆಗೆ ಸಾರ್ವಜನಿಕ ಸಂಚಾರಕ್ಕೆ ಅವಕಾಶವಿರುವುದಿಲ್ಲ. ಜತೆಗೆ ಅಂಗಡಿ ಮುಂಗಟ್ಟುಗಳಲ್ಲಿ ಎಲ್ಲ ಸಿಬಂದಿ ಮತ್ತು ಗ್ರಾಹಕರು ಮುಖಗವಸು ಘಮಾಸ್ಕ್‌] ನ್ನು ಕಡ್ಡಾಯವಾಗಿ ಧರಿಸಿರಬೇಕು. ಸಾಮಾಜಿಕ ಅಂತರವನ್ನು ಕಾಪಾಡಲು 6 ಅಡಿಗಳ ಅಂತರದಲ್ಲಿ ಗುರುತು ಹಾಕಿರಬೇಕು. ಜತೆಗೆ ಕೋವಿಡ್‌ 19 ಬಗ್ಗೆ ಸರಕಾರ ಹೊರಡಿಸಿದ ಎಲ್ಲ ಆದೇಶಗಳಲ್ಲಿನ ನಿರ್ದೇಶನಗಳನ್ನು ಚಾಚೂತಪ್ಪದೇ ಪಾಲಿಸಬೇಕು ಇಲ್ಲದಿದ್ದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next