Advertisement
ಬುಧವಾರ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿ.ಪಂ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ರಾಜ್ಯ ಸರಕಾರಿ ನೌಕರರ ಸಂಘದ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ- ಸಾಂಸ್ಕೃತಿಕ ಸ್ಪರ್ಧೆಯ ಉದ್ಘಾಟನೆ ವೇಳೆ ಮಾತನಾಡಿದ ಅವರು, ಸರಕಾರಿ ನೌಕರರಿಗೆ ರೋಗ ಬೇಗ ವ್ಯಾಪಿಸುತ್ತದೆ. ಇದಕ್ಕೆಂದೇ ದಿನದಲ್ಲಿ ಕನಿಷ್ಠ ಅರ್ಧ ಗಂಟೆಯಾದರೂ ವ್ಯಾಯಾಮ ಮಾಡುವ ಪರಿಪಾಠವನ್ನು ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.
ಸರಕಾರಿ ನೌಕರರು ಹೆಚ್ಚಿನ ಸಮಯವನ್ನು ಕಚೇರಿಯಲ್ಲಿಯೇ ಕಳೆಯುತ್ತಾರೆ. ಸಾಕಷ್ಟು ಒತ್ತಡವೂ ಅವರ ಮೇಲೆ ಇರುತ್ತದೆ. ಮನಸ್ಸಿನ ಮೇಲೆ ಇದು ಪರಿಣಾಮ ಬೀರದಂತೆ ಮಾಡಲು ವ್ಯಾಯಾಮ ಮಾಡಬೇಕು ಎಂದರು. ಅನೇಕ ಸರಕಾರಿ ನೌಕರರು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಇನ್ನೂ ಕೆಲವರು ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಕ್ರೀಡೆ ಎಂದ ಮೇಲೆ ಸೋಲು, ಗೆಲುವು ಸಾಮಾನ್ಯ. ಇದರಲ್ಲಿ ಭಾಗವಹಿಸುವಿಕೆ ಅತೀ ಮುಖ್ಯ ಎಂದು ಹೇಳಿದರು.
Related Articles
Advertisement