Advertisement

ತ್ಯಾಜ್ಯ ವಿಲೇವಾರಿ ವಾಹನಗಳಿಗೆ ಚಾಲನೆ

08:00 AM Jun 08, 2020 | Lakshmi GovindaRaj |

ಚಿಕ್ಕಬಳ್ಳಾಪುರ: ಸ್ವಚ್ಛಭಾರತ್‌ ಮಿಷನ್‌ ಗ್ರಾಮೀಣ ಯೋಜನೆಯಡಿ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಗ್ರಾಪಂಗಳಿಗೆ ಜಿಪಂ ವತಿಯಿಂದ ವಿತರಿಸಲಾದ 32 ಆಟೋ ಟಿಪ್ಪರ್‌ ಹಾಗೂ 7  ಟ್ರ್ಯಾಕ್ಟರ್‌ಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಜಿಲ್ಲಾಡಳಿತ ಮುಂಭಾಗದಲ್ಲಿ ಗ್ರಾಪಂಗಳಿಗೆ ವಿತರಿಸಿ, ಚಾಲನೆ ನೀಡಿದರು.

Advertisement

ಈ ವೇಳೆ ಮಾತನಾಡಿದ ಸಚಿವ ಸುಧಾಕರ್‌, ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತಗೊಳಿಸುವುದು ತಕ್ಷಣದ ಗುರಿಯಾಗಿದೆ.  ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ಘನ ಮತ್ತು ದ್ರವ ತ್ಯಾಜ್ಯವನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡಬೇಕಾದ ಅಗತ್ಯ ಇರುವುದರಿಂದ ಗ್ರಾಮೀಣಾ ಪ್ರದೇಶದಲ್ಲಿ ಶುಚಿತ್ವ  ನೈರ್ಮಲ್ಯದಲ್ಲಿ ಸುಸ್ಥಿರತೆ ಸಾಧಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಉಪಾಧ್ಯಕ್ಷೆ ನಿರ್ಮಲಾ, ಜಿಲ್ಲಾಧಿಕಾರಿ ಆರ್‌.ಲತಾ, ಜಿಪಂ ಸಿಇಒ  ಬಿ.ಫೌಝೀಯಾ ತರುನ್ನುಮ್‌, ಎಸ್ಪಿ ಜಿ.ಕೆ.ಮಿಥುನ್‌ ಕುಮಾರ್‌, ಅಪರ ಜಿಲ್ಲಾಧಿಕಾರಿ ಆರತಿ, ಉಪ ಕಾರ್ಯದರ್ಶಿ ನೋಮೇಶ್‌, ಉಪವಿಭಾಗಾಧಿಕಾರಿ ರಘುನಂದನ್‌ ಸೇರಿದಂತೆ ಜಿಲ್ಲೆಯ ತಾಪಂ ಇಒಗಳು ಹಾಗೂ ಸಂಬಂಧಪಟ್ಟ ಗ್ರಾಪಂಗಳ ಪಿಡಿಒಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next