Advertisement

ಕುಡಿಯುವ ನೀರಿನ ಘಟಕ ಉದ್ಘಾಟನೆ

12:52 PM Mar 20, 2020 | Suhan S |

ಆನೇಕಲ್‌ : ಪ್ರತಿಯೊಬ್ಬರಿಗೂ ಶುದ್ದ ಕುಡಿಯುವ ನೀರು ಲಭ್ಯವಾಗಬೇಕು ಎಂಬ ಉದ್ದೇಶದಿಂದ ಬಮೂಲ್‌ ಸಂಸ್ಥೆಯ ಸಹಾಯ ಹಸ್ತದಿಂದ ಹೀಲಲಿಗೆ ಗ್ರಾಮದಲ್ಲಿ ಶುದ್ದ ಕುಡಿಯುವ ನೀರಿನ ಘಟಕವನ್ನು ಪ್ರಾರಂಭಿಸಿದ್ದೇವೆ ಎಂದು ಬಮೂಲ್‌ ನಿರ್ದೇಶಕ ಬಿ.ಜೆ. ಆಂಜಿನಪ್ಪ ತಿಳಿಸಿದರು.

Advertisement

ಅವರು ತಾಲೂಕಿನ ಚಂದಾಪುರ ಪುರಸಭೆ ವ್ಯಾಪ್ತಿಯ ಹೀಲಲಿಗೆ ಗ್ರಾಮದಲ್ಲಿ ಬೆಂಗಳೂರು ಸಹಕಾರ ಹಾಲು ಒಕ್ಕೂಟ, ಬಮೂಲ್‌ ಟ್ರಸ್ಟ್‌ ಮತ್ತು ಹೀಲಲಿಗೆ ಹಾಲು ಉತ್ಪಾದಕರ ಸಹಕಾರ ಸಂಘದ ಸಹಯೋಗದಲ್ಲಿ ನೂತನವಾಗಿ ನಿರ್ಮಿಸಿರುವ ಶುದ್ದ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದರು. ಹೀಲಲಿಗೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಹೆಚ್‌.ಎ.ಚಂದ್ರಶೇಖರ್‌ ಮಾತನಾಡಿದರು. ಉದ್ದೇಶದಿಂದ ಮನಗೊಂಡು ಬಮೂಲ್‌ ಮತ್ತು ಹೀಲಲಿಗೆ ಹಾಲು ಉತ್ಪಾದಕರ ಸಹಕಾರ ಸಂಘದ ಸಹಯೋಗದಲ್ಲಿ ನೂತನವಾಗಿ ನಿರ್ಮಿಸಿರುವ ಶುದ್ದ ಕುಡಿಯುವ ನೀರಿನ ಘಟಕ ಪ್ರಾರಂಬಿಸಿದ್ದು ಗ್ರಾಮಸ್ಥರು ನೀರನ್ನು ಮಿತವ್ಯಯವಾಗಿ ಬಳಸಬೇಕು ಎಂದು ಹೇಳಿದರು.

ಆನೇಕಲ್‌ ಶಿಭಿರ ಕಚೇರಿಯ ಉಪ ವ್ಯವಸ್ಥಾಪಕ ಡಾ.ಮೋಹನ್‌ ಕುಮಾರ್‌ ಮತ್ತು ಚಂದಾಪುರ ಪುರಸಭೆ ಸದಸ್ಯರು ಹಾಗೂ ಹೀಲಲಿಗೆ ಗ್ರಾಮಸ್ಥರು ಸೇರಿದಂತೆ ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next