Advertisement
ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡರೂ ಪೊಲೀಸರು ಪ್ರಕರಣ ದಾಖಲಿಸುವ, ಠಾಣೆಗೆ ಕರೆದೊಯ್ದು ಮುಚ್ಚಳಿಕೆ ಬರೆಸಿಕೊಳ್ಳುವ ಮೂಲಕ ದೌರ್ಜನ್ಯ ನಡೆಸುತ್ತಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯದ ಹರಣ ನಡೆಯುತ್ತಿದೆ. ಇಂಥ ದೌರ್ಜನ್ಯದಿಂದ ಬಾಧಿತರಿಗೆ ಉಚಿತವಾಗಿ ಕಾನೂನು ನೆರವು ನೀಡುವುದಕ್ಕಾಗಿ ಎರಡು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಛೇರಿ ತೆರೆಯುವುದಾಗಿ ಹೇಳಿದರು.
Related Articles
Advertisement
ಇದೇ ಕಾರಣಕ್ಕೆ ನಾನು ಕಾನೂನು ಹೋರಾಟಕ್ಕಾಗಿ ಹೈಕೋರ್ಟ್ ಮೊರೆ ಹೋಗಿದ್ದು, ನಮ್ಮ ವಕೀಲರು ಸಮರ್ಥವಾಗಿ ವಾದ ಮಂಡಿಸಿದ್ದಾರೆ. ಜನವರಿ 5 ರಂದು ಮತ್ತೆ ವಿಚಾರಣೆ ಇದ್ದು, ನ್ಯಾಯಕ್ಕೆ ಜಯ ಸಿಗಲಿದೆ ಎಂಬ ವಿಶ್ವಾಸವಿದೆ ಎಂದರು.
ಇದನ್ನೂ ಓದಿ:Hubli; ಸಂಸತ್ ಭದ್ರತೆ ವಿಚಾರದಲ್ಲಿ ರಾಜಕೀಯ ಸರಿಯಲ್ಲ: ಪ್ರಹ್ಲಾದ ಜೋಶಿ
ಬೆಳಗಾವಿ ಅಧಿವೇಶನದಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಉತ್ತರ ಕರ್ನಾಟಕ ಭಾಗಕ್ಕೆ ಎಲ್ಲ ರಂಗಗಳಲ್ಲಿ ಹಾಗೂ ಎಲ್ಲ ರೀತಿಯಲ್ಲಿ ಆಗಿರುವ ಅಭಿವೃದ್ಧಿ ಹೀನತೆ ಬಗ್ಗೆ ಧ್ವನಿ ಎತ್ತಿದ್ದೇನೆ. ಬಿಜೆಪಿ ಜೋಡೆತ್ತುಗಳಿಗಿಂತ ನಾನೇ ಹೆಚ್ಚು ಮಾತನಾಡಿದ್ದೇನೆ ಎಂದರು.
ಸದನದಲ್ಲಿ ಸರ್ಕಾರದ ವಿರುದ್ಧ ಭಾರಿ ಹೋರಾಟ ಮಾಡುವುದಾಗಿ ಗುಡುಗಿದ್ದವರು ತಣ್ಣಗಾಗಿ ಪ್ರತಿಭಟನೆ ಮಾಡಿದರು. ಈ ಕಾರಣಕ್ಕಾಗಿಯೇ ಕಾಂಗ್ರೆಸ್ ನಾಯಕರು ನನ್ನ ನಡೆಗೆ ವಿಪಕ್ಷದ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಕರಿಗಿಂತ ಹೆಚ್ಚು ಕೆಲಸ ಮಾಡಿದ್ದಾಗಿ ಹೊಗಳಿದ್ದಾರೆ ಎಂದು ವಿಪಕ್ಷದ ನಾಯಕ ಅಶೋಕ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಪರೋಕ್ಷವಾಗಿ ಕುಟುಕಿದರು.
ಭಯೋತ್ಪಾದನೆ ವಿಷಯದಲ್ಲಿ ಬೆಂಗಳೂರು ಸೇರಿದಂತೆ ಇತರೆ ಕಡೆಗಳಲ್ಲಿ ಎನ್ಐಎ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.
ವಿಜಯಪುರ ನಗರದ ಓರ್ವ ಇಸ್ಲಾಂ ಧರ್ಮಗುರು ವಿರುದ್ಧ ನಾನು ಮಾಡಿರುವ ಆರೋಪಿಗಳ ಕುರಿತು ತನಿಖೆ ನಡೆಯುವುದು ಖಚಿತ. ಆದರೆ ಈ ಕುರಿತು ಬಹಿರಂಗವಾಗಿ ಮಾಹಿತಿ ಹಂಚಿಕೊಳ್ಳಲಾರೆ ಎಂದರು.