Advertisement

ಕೃಷಿ ಅಭಿಯಾನ ಕಾರ್ಯಕ್ರಮಕೆ ಚಾಲನೆ

03:16 PM May 30, 2017 | |

ಕಲಬುರಗಿ: ಕೃಷಿ ಹಾಗೂ ಕೃಷಿಗೆ ಸಂಬಂಧಿಸಿದ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ರೈತರಿಗೆ ಅರಿವು ಮೂಡಿಸಲು ಕಲಬುರಗಿ ಜಿಲ್ಲೆಯ ಎಲ್ಲ 32 ಹೋಬಳಿಗಳಲ್ಲಿ ನಡೆಯಲಿರುವ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಜಿಪಂ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಚಾಲನೆ ನೀಡಿದರು. 

Advertisement

ನಗರದ ಮಿನಿ ವಿಧಾನಸೌಧ ಆವರಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಸುಧಾರಿತ ಬೇಸಾಯ ಕ್ರಮ ಕಿರು ಹೊತ್ತಿಗೆ, ನೀರಿನ ಸದುಪಯೋಗ ಮತ್ತು ಮಣ್ಣು ಆರೋಗ್ಯ ಕುರಿತಾದ ಕರಪತ್ರ ಬಿಡುಗಡೆ ಮಾಡಲಾಯಿತು. 

ವಿಧಾನ ಪರಿಷತ್‌ ಸದಸ್ಯ ಅಮರನಾಥ ಪಾಟೀಲ, ಜಿಲ್ಲಾಧಿಕಾರಿ ಉಜ್ವಲ್‌ಕುಮಾರ ಘೋಷ್‌, ಜಿಪಂ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸಂಜೀವನ ಯಾಕಾಪುರ, ಸಿಇಒ ಹೆಪ್ಸಿಬಾರಾಣಿ ಕೊರ್ಲಪಾಟಿ, ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಪಾಟೀಲ ಧಂಗಾಪುರ, ಜಂಟಿ ಕೃಷಿ ನಿರ್ದೇಶಕ ಜಿಲಾನಿ ಎಚ್‌. ಮೊಕಾಶಿ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು. 

ಸಹಾಯಕ ಕೃಷಿ ನಿರ್ದೇಶಕ ಚಂದ್ರಕಾಂತ ಜೇವಣಗಿ ಸ್ವಾಗತಿಸಿದರು. ನೀರು ಉಳಿಸಿ ಜೀವರಾಶಿ ರಕ್ಷಿಸಿ ಎಂಬ ಘೋಷ ವಾಕ್ಯದೊಂದಿಗೆ 2017-18ನೇ ವರ್ಷವನ್ನು ಜಲ ಜಾಗೃತಿ ವ‚ರ್ಷ ಎಂದು ಆಚರಿಸಲಾಗುತ್ತಿದೆ. ಕೃಷಿ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಹೋಬಳಿ ಮತ್ತು ಗ್ರಾಮ ಮಟ್ಟದಲ್ಲಿ ರೈತರಿಗೆ ಕೃಷಿಯಲ್ಲಿ ನೀರಿನ ಸದ್ಬಳಕೆ ಮತ್ತು ಸಂರಕ್ಷಣೆ ಕುರಿತು ಮೂರು ಸಂಚಾರಿ ವಾಹನಗಳ ಮೂಲಕ ಜಾಗೃತಿ ಮೂಡಿಸಲಾಗುವುದು.

ಅಭಿಯಾನದ ಅಂಗವಾಗಿ ಕೃಷಿ ವಸ್ತು ಪ್ರದರ್ಶನ, ರೈತರ ಸಂವಾದ, ಆಯಾ ಹೋಬಳಿಗೆ ಸಂಬಂಧಿಸಿದಂತೆ ವಿವರವಾಗಿ ಬೆಳೆವಾರು ಸಮಸ್ಯೆಗಳ ಚರ್ಚೆ ಹಾಗೂ ಪರಿಹಾರ ಕ್ರಮ ಕೈಗೊಳ್ಳಲಾಗುವುದು. ಇದಲ್ಲದೆ ಇತರೆ ಕೃಷಿ ಸಂಬಂಧಿಸಿದ ಪಶುಸಂಗೋಪನೆ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ ಮತ್ತಿತರ ಇಲಾಖೆಗಳ ಅಧಿಕಾರಿಗಳು ರೈತರ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಸೂಚಿಸುವರು.

Advertisement

ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ವಿವಿಧ ಯೋಜನೆಗಳನ್ನು ಬಿಂಬಿಸುವ ಪ್ರದರ್ಶಿಕೆಗಳು, ಮಾದರಿಗಳು, ಪ್ರಾತ್ಯಕ್ಷಿಕೆ ಒಳಗೊಂಡ ಕೃಷಿ  ವಸ್ತು  ಪ್ರದರ್ಶನ ಸಹ ಏರ್ಪಡಿಸಲಾಗುತ್ತದೆ ಎಂದು ಕೃಷಿ ಇಲಾಖೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next