Advertisement

Traffic Rules: ನಿಯಮ ಉಲ್ಲಂಘಿಸುವ ಶಾಲಾ ವಾಹನಗಳ ವಿರುದ್ಧ ಕಾರ್ಯಾಚರಣೆ

03:17 PM Nov 23, 2023 | Team Udayavani |

ಬೆಂಗಳೂರು: ನಿಗದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನಗಳ ವಿರುದ್ಧ ನಗರ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.

Advertisement

ಮಂಗಳವಾರ ನಗರದ ಎಲ್ಲ ಸಂಚಾರ ಠಾಣೆಗಳ ವ್ಯಾಪ್ತಿಯಲ್ಲಿ ಮಧ್ಯಾಹ್ನ 2.30ರಿಂದ ಸಂಜೆ 4.30ರ ತನಕ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಶಾಲಾ ವಾಹನ, ಖಾಸಗಿ ವಾಹನಗಳಲ್ಲಿ ನಿಗದಿಗಿಂತ ಹೆಚ್ಚು ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಚಾಲಕರ ವಿರುದ್ಧ ಕ್ರಮ ಜರುಗಿಸಲಾಗಿದೆ.

ಕೇವಲ ಎರಡು ಗಂಟೆಯಲ್ಲೇ 2050 ವಾಹನಗಳನ್ನು ಪರಿಶೀಲಿಸಿ, 319 ಬಸ್‌, 122 ಆಟೋ, 133 ಓಮ್ನಿ, 332 ವ್ಯಾನ್‌ಗಳು, 88 ಇತರೆ ಸೇರಿ 994 ವಾಹನಗಳು/ ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಜೀವಕ್ಕೆ ಆಪತ್ತು ತರುವ ರೀತಿಯಲ್ಲಿ ನಿಗದಿಗಿಂತ ಹೆಚ್ಚು ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳ ವಿರುದ್ಧ ನಿರಂತರ ದೂರುಗಳು ಬರುತ್ತಿದ್ದವು. ಈ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ.

ಹಲವು ಚಾಲಕರು ಹಣದ ಆಸೆಗೆ ನಿಗದಿಗಿಂತ ಹೆಚ್ಚು ಮಕ್ಕಳನ್ನು ವಾಹನದಲ್ಲಿ ಕರೆದೊಯ್ಯುತ್ತಿದ್ದಾರೆ. ಕೆಲವರಂತೂ ಉಸಿರಾಡಲು ಸಾಧ್ಯವಾಗದ ರೀತಿಯಲ್ಲಿ ಮಕ್ಕಳನ್ನು ವಾಹನದಲ್ಲಿ ಕೂರಿಸಿರುತ್ತಾರೆ. ಅಂತಹ ವಾಹನಗಳನ್ನು ಪತ್ತೆ ಹಚ್ಚಿ ದಂಡ ಹಾಕಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next