ಇದೀಗ ಪಾಲಿಕೆ ಸದಸ್ಯರನ್ನೂ ಸೆಳೆಯುವ ಕಸರತ್ತುಗಳು ಶುರುವಾಗಿವೆ.
ಬೆಂಗಳೂರು ದಕ್ಷಿಣ ಹಾಗೂ ಕೇಂದ್ರ ಲೋಕಸಭೆ ಕ್ಷೇತ್ರಗಳ ವ್ಯಾಪ್ತಿಯ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿನ ಬಿಜೆಪಿ ಪಾಲಿಕೆ ಸದಸ್ಯರಿಗೆ ಗಾಳ ಹಾಕಿರುವ ಕಾಂಗ್ರೆಸ್ ಮುಖಂಡರು, ಈಗಾಗಲೇ ಸದಸ್ಯರ ಜತೆ
ಒಂದು ಸುತ್ತಿನ ಮಾತುಕತೆ ಮುಗಿಸಿದ್ದಾರೆ.
Advertisement
ಈ ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ನೇರ ಪೈಪೋಟಿ ಇದೆ. ಜತೆಗೆ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಾಲಿಕೆ ಸದಸ್ಯರು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗುವ ಸಾಧ್ಯತೆಯಿದೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲೇ ಬೇಕೆಂದು ಪಣತೊಟ್ಟಿರುವ ನಾಯಕರು ತಳಮಟ್ಟದ ಬಿಜೆಪಿ ನಾಯಕರನ್ನು ಪಕ್ಷಕ್ಕೆ ಸೆಳೆಯಲು ಯೋಜನೆ ರೂಪಿಸಿದ್ದಾರೆ.
ಸ್ಥಾನಮಾನ ಕೊಡುವ ಭರವಸೆ ನೀಡಿದ್ದಾರೆ. ಜತೆಗೆ ಮುಂದಿನ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನೀಡಿ, ಗೆಲ್ಲಿಸಿಕೊಂಡು ಬರುವ ಆಶ್ವಾಸನೆ ನೀಡಿದ್ದಾರೆ ಎನ್ನಲಾಗಿದೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಕೆಲ ಬಿಜೆಪಿ ಪಾಲಿಕೆ ಸದಸ್ಯರನ್ನು ಪಕ್ಷಕ್ಕೆ ಸೆಳೆಯುವ ಮಾತುಕತೆ ನಡೆದಿತ್ತಾದರೂ ಸಾಧ್ಯವಾಗಿರಲಿಲ್ಲ. ಪ್ರಸ್ತುತ ಮೊದಲ ಮಾತುಕತೆಯಲ್ಲಿ ಬಹುತೇಕ ಬಿಜೆಪಿ ಸದಸ್ಯರು
ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
Related Articles
ನಡೆಯುತ್ತಿದೆ. ಆ ಪೈಕಿ ನಾಲ್ಕೈದು ಮಂದಿ ಆಹ್ವಾನವನ್ನು ತಿರಸ್ಕರಿಸಿದ್ದು, 6 ಸದಸ್ಯರು ನಮ್ಮೊಂದಿಗೆ ಬರುವ ಸಾಧ್ಯತೆಯಿದೆ. ಶೀಘ್ರದಲ್ಲಿಯೇ ಅಂತಿಮ ಮಾತುಕತೆ ನಡೆಸಿ ಅವರನ್ನು ಪಕ್ಷಕ್ಕೆ ಕರೆತರುವುದಾಗಿ ಕಾಂಗ್ರೆಸ್ ನಾಯಕರೊಬ್ಬರು ಮಾಹಿತಿ ನೀಡಿದರು.
Advertisement