Advertisement

BJP: ಆಪರೇಷನ್‌ ಕಮಲಕ್ಕೆ ಕೈ ಹಾಕಿದರೆ ಬಿಜೆಪಿ ಅಂತ್ಯ: ಎಚ್‌ಕೆಪಿ

10:50 PM Oct 29, 2023 | Team Udayavani |

ಹುಬ್ಬಳ್ಳಿ: ಬಿಜೆಪಿ ಮುಖಂಡರು ಕಾಂಗ್ರೆಸ್‌ ನಾಯಕರಿಗೆ ಆಮಿಷವೊಡ್ಡಿ, ಆಪರೇಷನ್‌ ಕಮಲದಂತಹ ನೀಚ ಕೆಲಸಕ್ಕೆ ಕೈ ಹಾಕಿದ್ದಾರೆ. ಇದನ್ನು ಮಾಡಿದ್ದೇ ಆದಲ್ಲಿ ಬಿಜೆಪಿ ಅಂತ್ಯ ಕಾಣಲಿದೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಆಪರೇಷನ್‌ ಕಮಲದಂಥ ಕೆಲಸ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಈಗಾಗಲೇ ರಾಜ್ಯದಲ್ಲಿ ಬಿಜೆಪಿ ನಾಯಕರಿಗೆ ಜನರು ಬುದ್ಧಿ ಕಲಿಸಿದ್ದಾರೆ. ರಾಷ್ಟ್ರಮಟ್ಟದಲ್ಲಿ ಅವರ ಪ್ರಭಾವ ಕಡಿಮೆಯಾಗಿದೆ. ಹೀಗಿದ್ದಾಗಲೂ ಆಪರೇಷನ್‌ ಕಮಲಕ್ಕೆ ಮುಂದಾಗಿದ್ದಾರೆಂದರೆ ಲೋಕಸಭೆ ಚುನಾವಣೆಯಲ್ಲಿ ಜನರು ಮತ್ತೆ ಅವರಿಗೆ ಪಾಠ ಕಲಿಸಲಿದ್ದಾರೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಯಾಗುವ ವಿಚಾರ ಪಕ್ಷದ ಹೈಕಮಾಂಡ್‌ಗೆ ಬಿಟ್ಟದ್ದು. ಇದು ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಬೇಕೇ ಹೊರತು ಮಾಧ್ಯಮಗಳಲ್ಲಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next