Advertisement
ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಗೋಕಾಕ್‌ನಲ್ಲಿ ಮತದಾನ ಮಾಡಿದ ಅನಂತರ, “ತಾಂತ್ರಿಕವಾಗಷ್ಟೇ ಕಾಂಗ್ರೆಸ್‌ನಲ್ಲಿದ್ದೇನೆ’ ಎಂದು ಹೇಳುವ ಮೂಲಕ ರಾಜೀನಾಮೆ ಸುಳಿವು ನೀಡಿರುವುದು ಆಪರೇಷನ್ ಶುರುವಾಗಿದೆ ಎಂಬುದಕ್ಕೆ ಪುಷ್ಟಿ ನೀಡಿದೆ. ಜತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರೂ ರಮೇಶ್ ಜತೆ ನಾಗೇಂದ್ರ, ಮಹೇಶ್ ಕುಮಠಳ್ಳಿ ಸೇರಿ 10ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದಿರುವುದೂ ಸರಕಾರದ ಆತಂಕಕ್ಕೆ ಕಾರಣವಾಗಿದೆ.
ಮತ್ತೂಂದೆಡೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಸಹೋದರ ಸತೀಶ್ ಜಾರಕಿಹೊಳಿ ಅವರು, ರಮೇಶ್ ಪಕ್ಷ ಬಿಟ್ಟುಹೋಗಲಿ ಪರವಾಗಿಲ್ಲ. ಗೊಂದಲದಲ್ಲಿ ಸರಕಾರ ನಡೆಸುವುದು ಬೇಡ ಎಂಬ ಚಿಂತನೆಯಲ್ಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಪರಮೇಶ್ವರ್ ಮತ್ತು ಡಿ.ಕೆ.ಶಿ. ಅವರು ರಮೇಶ್ ಮನವೊಲಿಸುವ ಪ್ರಯತ್ನಯಲ್ಲಿದ್ದಾರೆ ಎನ್ನಲಾಗಿದೆ.
Related Articles
ಬಿಜೆಪಿ ಒಂದು ವೇಳೆ ಸರಕಾರ ಅಸ್ಥಿರಗೊಳಿಸಲು ಮುಂದಾದರೆ ಬಿಜೆಪಿಯ ಐವರು ಶಾಸಕರನ್ನು ತಮ್ಮತ್ತ ಸೆಳೆಯಲು ಸಿಎಂ ಕುಮಾರಸ್ವಾಮಿ ತಂತ್ರಗಾರಿಕೆ ರೂಪಿಸಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಉತ್ತರ ಕರ್ನಾಟಕ ಭಾಗದ ಐವರು ಶಾಸಕರ ಜತೆ ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಇದಕ್ಕಾಗಿಯೇ ಉಡುಪಿಯಲ್ಲಿ ವಿಶ್ರಾಂತಿಯಲ್ಲಿದ್ದ ಸಿಎಂ ದಿಢೀರನೇ ಬೆಂಗಳೂರಿಗೆ ವಾಪಸ್ ಆಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ ಈ ಬಗ್ಗೆ ದೇವೇಗೌಡ ಬಳಿಯೂ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
Advertisement