Advertisement
ತಾಲೂಕಿನ ತೆಂಗಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಡಾ| ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದ ಉದ್ಘಾಟನೆ ಮತ್ತು ಪುತ್ಥಳಿಗೆ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು.
ಪ್ರಗತಿ ಕಾಲೋನಿ ಯೋಜನೆಯಲ್ಲಿ ಈ ಭಾಗವನ್ನು ಅಭಿವೃದ್ಧಿ ಪಡಿಸುತ್ತೇನೆ ಎಂದು ಭರವಸೆ ನೀಡಿದರು.
Related Articles
Advertisement
ಜಿಪಂ ಮಾಜಿ ಸದಸ್ಯರಾದ ಮಾಪಣ್ಣ ಗಂಜಗೇರಿ, ಟಿ.ಟಿ ಭೀಮರಾಯ, ರಮೇಶ ಮರಗೋಳ, ಶಂಭುಲಿಂಗ ಗುಂಡಗುರ್ತಿ, ಗ್ರಾಪಂ ಮಾಜಿ ಅಧ್ಯಕ್ಷ ಮಲ್ಲಪ್ಪ ಹೊಸ್ಮನಿ ಇಂಗನಕಲ್, ಸುನೀಲ ದೊಡ್ಮನಿ, ಮಲ್ಲಿಕಾರ್ಜುನ ಬೆಣ್ಣೂರಕರ್, ಮಹ್ಮದ್ ಹನೀಫಸಾಬ್, ಬಸವರಾಜ ತುಪ್ಪದ್, ಪಂಡಿತರಾವ್ ಬೇರೆನ್, ಶಿವರಾಜ ಕಲಗುರ್ತಿ, ಶರಣಗೌಡ ಪಾಟೀಲ ತೊನಸನಳ್ಳಿ, ವೀರಭದ್ರಯ್ಯ ಸಾಲಿಮಠ ಇದ್ದರು.
ಭಾರತ ದೇಶದ ಸಂವಿಧಾನ ಇಡೀ ವಿಶ್ವದಲ್ಲಿಯೇ ಪ್ರಖ್ಯಾತಿ ಪಡೆದಿದೆ. ಸಂವಿಧಾನದಿಂದ ದೇಶ ಮುನ್ನಡೆಯುತ್ತಿದೆ. ದೇಶದಲ್ಲಿ ಸರ್ವರಿಗೂ ಸಮಪಾಲು, ಸಮಬಾಳು ಎನ್ನುವ ತತ್ವ ಅನುಸರಿಸಿ ಕೆಲಸ ಮಾಡಲಾಗುತ್ತಿದೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸಂವಿಧಾನವನ್ನು ಗೌರವಿಸಿ, ಜನರ ಆಶೋತ್ತರಗಳಿಗೆ ಸ್ಪಂದಿ ಸಿ, ಉತ್ತಮ ಚಿಂತನೆ ಅಳವಡಿಸಿಕೊಂಡು ಅಭಿವೃದ್ಧಿ ಕೆಲಸ ಮಾಡಬೇಕು. ಆದರೆ ಈಗಿನ ಪರಿಸ್ಥಿತಿ ಹೇಗಿದೆ ಎಂದರೆ ಸಂವಿಧಾನದ ತತ್ವ ಪ್ರತಿಪಾದಿಸುವವರಿಗೆ ದೇಶದ್ರೋಹಿ ಪಟ್ಟ ಕಟ್ಟಲಾಗುತ್ತಿದೆ. ಪ್ರಿಯಾಂಕ್ ಖರ್ಗೆ, ಸಮಾಜ ಕಲ್ಯಾಣ ಇಲಾಖೆ ಸಚಿವ