ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಆಪರೇಷನ್ ಕಮಲ ನಡೆಯುವುದಿಲ್ಲ. ಹೀಗಾಗಿ, ಬಿಜೆಪಿ ನಾಯಕರು ಮೈತ್ರಿ ಪಕ್ಷಗಳಿಗೆ ಆಡಳಿತ ನಡೆಸಲು ಬಿಟ್ಟು ವಿರೋಧ ಪಕ್ಷವಾಗಿ ಕೆಲಸ ಮಾಡಲಿ ಎಂದು ಅರಣ್ಯ ಸಚಿವ ಆರ್.ಶಂಕರ್ ಸಲಹೆ ನೀಡಿದರು.
ತಾಲೂಕಿನ ಮುದ್ದೇನಹಳ್ಳಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ವಿರೋಧ ಪಕ್ಷ ಬಿಜೆಪಿ ಸುಮ್ಮನೆ ಇರುವುದು ವಾಸಿ. ಆಪರೇಷನ್ ಕಮಲಕ್ಕೆ ಯಾರೂ ಹೋಗುವುದಿಲ್ಲ. ಬಿಜೆಪಿ ಸೇರುವಂತೆ ನನಗೆ ಯಾವುದೇ ಒತ್ತಡವಿಲ್ಲ ಎಂದರು.ಮೈತ್ರಿ ಸರ್ಕಾರದಲ್ಲಿ ಕೆಲ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಇದ್ದವು. ಈಗ ಎಲ್ಲವೂ ಸರಿ ಹೋಗಿದೆ. ಯಾವುದೇ ಗೊಂದಲಗಳು ಇಲ್ಲ ಎಂದರು.
ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 3000ಕ್ಕೂ ಅಧಿಕ ಹುದ್ದೆಗಳನ್ನು ಹಂತ, ಹಂತವಾಗಿ ಭರ್ತಿ ಮಾಡಲು ಇಲಾಖೆ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ಅರಣ್ಯ ಇಲಾಖೆಯ ಕಾರ್ಯಕ್ರಮಗಳಿಗೆ ಸರ್ಕಾರ ಸದ್ಯಕ್ಕೆ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಇಲಾಖೆ ಕೈಗೊಂಡಿರುವ ಹಸಿರು ಕರ್ನಾಟಕ ಯೋಜನೆ ಅಭಿಯಾನಕ್ಕೆ 97 ಕೋಟಿ ರೂ. ಅನುದಾನ ಒದಗಿಸಿದೆ. ಯಾವುದೇ ಅನುದಾನದ ಕೊರತೆ ಇಲ್ಲ.
– ಆರ್.ಶಂಕರ್, ಅರಣ್ಯ ಸಚಿವ.