Advertisement

ಆಪರೇಷನ್ ಆಡಿಯೋ ಕೇಸ್; BSYಗೆ ಬಿಗ್ ರಿಲೀಫ್, ಕೋರ್ಟ್ ಹೇಳಿದ್ದೇನು?

05:37 AM Feb 22, 2019 | Sharanya Alva |

ಬೆಂಗಳೂರು: ಆಪರೇಷನ್ ಕಮಲ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸೇರಿದಂತೆ ನಾಲ್ವರ ವಿರುದ್ಧದ ಎಫ್ ಐಆರ್ ಗೆ ಕಲಬುರಗಿ ಹೈಕೋರ್ಟ್ ಮಧ್ಯಂತರ ತಡೆ ನೀಡಿ ತೀರ್ಪು ಪ್ರಕಟಿಸಿದೆ.

Advertisement

ಆಪರೇಷನ್ ಕಮಲ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾದ ಎಫ್ ಐಆರ್ ಅನ್ನು ರದ್ದುಗೊಳಿಸಬೇಕೆಂದು ಕೋರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ನಾಲ್ವರು ಕಲಬುರಗಿ ಹೈಕೋರ್ಟ್  ಮೆಟ್ಟಿಲೇರಿದ್ದರು. ಈ ಬಗ್ಗೆ ವಾದ, ಪ್ರತಿವಾದ ಆಲಿಸಿದ್ದ ಹೈಕೋರ್ಟ್ ಪೀಠದ ನ್ಯಾ.ಪಿಜಿಎಂ ಪಾಟೀಲ್ ತೀರ್ಪನ್ನು ಶುಕ್ರವಾರಕ್ಕೆ ಕಾಯ್ದಿರಿಸಿದ್ದರು.

ಬಿಎಸ್ ಯಡಿಯೂರಪ್ಪ, ಶಾಸಕರಾದ ಶಿವನಗೌಡ ನಾಯಕ್, ಪ್ರೀತಂ ಗೌಡ ಸೇರಿದಂತೆ ನಾಲ್ವರ ವಿರುದ್ಧ ಆಪರೇಷನ್ ಕಮಲ ಆಡಿಯೋ ಪ್ರಕರಣದಲ್ಲಿ ರಾಯಚೂರು ಜಿಲ್ಲೆಯ ದೇವದುರ್ಗ ಪೊಲೀಸರು ಎಫ್ ಐಆರ್ ದಾಖಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next