Advertisement
ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಎಲ್ಲ ಸಚಿವರೊಂದಿಗೆ ಲೋಕಾಭಿರಾಮವಾಗಿ ಮಾತನಾಡುತ್ತಾ ನಾಲ್ವರು ಅತೃಪ್ತರಿಗೆ ನೋಟಿಸ್ ನೀಡಿದ್ದರೂ, ಅತೃಪ್ತರು ಯಾರೂ ನೇರವಾಗಿ ಬಂದು ಭೇಟಿಯಾಗಿಲ್ಲ. ಸದನದ ಕಲಾಪಕ್ಕೂ ಹಾಜರಾಗದೇ ಇದ್ದರೆ, ಪಕ್ಷದಿಂದ ಉಚ್ಚಾಟನೆ ಮಾಡಬೇಕಾ?, ಬೇಡವೇ ಎಂದು ಆಪ್ತರ ಜತೆ ಚರ್ಚಿಸಿದರು ಎಂದು ತಿಳಿದು ಬಂದಿದೆ.
Related Articles
Advertisement
ಭೋಜನ ಕೂಟಕ್ಕೆ ಕಂದಾಯ ಸಚಿವ ಆರ್.ವಿ ದೇಶಪಾಂಡೆ ಹಾಗೂ ಕೃಷಿ ಸಚಿವ ಶಿವಶಂಕರ ರೆಡ್ಡಿ ತಡವಾಗಿ ಆಗಮಿಸಿದರು. ಆರೋಗ್ಯ ಸಮಸ್ಯೆಯಿಂದ ಸಚಿವರಾದ ಸಿ.ಎಸ್.ಶಿವಳ್ಳಿ ಹಾಗೂ ಎಂ.ಟಿ.ಬಿ.ನಾಗರಾಜ್ ಸಭೆಯಿಂದ ಬೇಗ ತೆರಳಿದರು.
ನೋ ಡ್ರಿಂಕ್ಸ್: ರೆಸಾರ್ಟ್‌ನಲ್ಲಿ ಕೈ ಶಾಸಕರಿಬ್ಬರು ಹೊಡೆದಾಡಿಕೊಂಡಿದ್ದರಿಂದ ಸಿದ್ದರಾಮಯ್ಯ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಸಚಿವರಿಗೆ ಮದ್ಯಪಾನ ವ್ಯವಸ್ಥೆ ಇರಲಿಲ್ಲ ಎಂದು ಹೇಳಲಾಗಿದೆ.
ಕಾಂಗ್ರೆಸ್ ರಾಜ್ಯ ಕಾರ್ಯಕಾರಿಣಿ ಇಂದು
ಬೆಂಗಳೂರು: ರಾಜ್ಯ ಕಾಂಗ್ರೆಸ್ ಕಾರ್ಯಕಾ ರಿಣಿ ಸಭೆ ಬುಧವಾರ ನಗರದ ಅರಮನೆ ಮೈದಾನದಲ್ಲಿ ನಡೆಯಲಿದೆ. ಪಕ್ಷದ ಶಾಸಕರು, ಸಚಿವರು, ಸಂಸದರು, ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಸೇರಿ ಎಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡು ಸ್ಪರ್ಧೆ ಮಾಡಲು ನಿರ್ಧರಿಸಿರುವುದರಿಂದ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಅಗತ್ಯ ಕಾರ್ಯತಂತ್ರ ರೂಪಿಸುವುದು. ಜಿಲ್ಲಾಮಟ್ಟದಲ್ಲಿ ಜೆಡಿಎಸ್ ಜೊತೆಗೆ ಗೊಂದಲ ಸೃಷ್ಠಿಸಿಕೊಳ್ಳದೇ ಹೊಂದಾಣಿಕೆಯಿಂದ ಚುನಾವಣೆಯಲ್ಲಿ ಕಾರ್ಯ ನಿರ್ವಹಿಸುವ ಕುರಿತು ಪಕ್ಷದ ಮುಖಂಡರಿಗೆ ಸಲಹೆ ಸೂಚನೆ ನೀಡುವ ಸಾಧ್ಯತೆ ಇದೆ. ಪರಮೇಶ್ವರ್ ಭೋಜನ ಕೂಟ: ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪಕ್ಷದ ಸಚಿವರಿಗೆ ಭೋಜನ ಕೂಟ ಏರ್ಪಡಿಸಿದ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಎರಡೂ ಪಕ್ಷಗಳ ಸಚಿವರು ಹಾಗೂ ಶಾಸಕರಿಗೆ ವಿಶೇಷ ಭೋಜನ ಕೂಟ ಏರ್ಪಡಿಸಿದ್ದಾರೆ. ಭೋಜನ ಕೂಟದ ಬೆನ್ನಲ್ಲೇ ಜಂಟಿ ಶಾಸಕಾಂಗ ಪಕ್ಷದ ಸಭೆಯನ್ನೂ ನಡೆಸಬೇಕೆಂದು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದರು. ಆದರೆ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಂದ ಅಧಿಕೃತ ಒಪ್ಪಿಗೆ ದೊರೆಯದ ಹಿನ್ನೆಲೆಯಲ್ಲಿ ಗುರುವಾರ ನಡೆಸಲು ಉದ್ದೇಶಿಸಿದ್ದ ಜಂಟಿ ಶಾಸಕಾಂಗ ಸಭೆಯನ್ನು ಮುಂದೂಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.