Advertisement
ಫೆ. 1ರಂದು ಮಂಡಿಸುವ 2022-23ನೇ ಸಾಲಿನ ಮುಂಗಡ ಪತ್ರದಲ್ಲಿ ಕೃಷಿ ಕ್ಷೇತ್ರಕ್ಕೆ 18ರಿಂದ 18.5 ಲಕ್ಷ ಕೋಟಿ ರೂ.ಗಳ ವರೆಗೂ ಮೊತ್ತ ಮೀಸಲಿಡಲು ಚಿಂತಿಸಲಾಗುತ್ತಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2021-22ನೇ ಸಾಲಿನಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ 16.5 ಲಕ್ಷ ಕೋಟಿ ರೂ. ಮೊತ್ತವನ್ನು ರೈತಾಪಿ ವರ್ಗದ ಜನರಿಗಾಗಿ ಮೀಸಲಿರಿಸಿದ್ದರು.
Related Articles
ಕೃಷಿ ವರ್ಗಕ್ಕೆ ಶೇ. 9ರ ಬಡ್ಡಿಯಲ್ಲಿ ಸಾಲ ನೀಡಲಾ ಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಹಾಗೂ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡುವ ನಿಟ್ಟಿನಲ್ಲಿ ಅಲ್ಪಾವಧಿ ಸಾಲವನ್ನು ಹೊರೆ
ಯಾಗದ ಬಡ್ಡಿ ದರದಲ್ಲಿ ನೀಡಲಾಗುತ್ತದೆ. ಭದ್ರತೆ ರಹಿತ ಸಾಲದ ಮೊತ್ತವನ್ನೂ ಹೆಚ್ಚಿಸಲಾಗಿದೆ. 3 ಲಕ್ಷ ರೂ. ವರೆಗಿನ ಅಲ್ಪಾವಧಿ ಸಾಲಕ್ಕೆ ಶೇ. 2 ಕಡಿಮೆ ಬಡ್ಡಿ ದರ ವಿಧಿಸಲಾಗುತ್ತದೆ.
Advertisement