Advertisement

ನಂದಿನಿ ಮಳಿಗೆಗಳ ಬಳಿ ಹಣ್ಣು- ತರಕಾರಿ ಮಾರಾಟಕ್ಕೆ ರೈತರಿಗೆ ಅವಕಾಶ

01:43 PM Apr 26, 2020 | keerthan |

ಬೆಂಗಳೂರು: ತಾವು ಬೆಳೆದ ಹಣ್ಣು ತರಕಾರಿಗಳನ್ನು ಮಾರಲು ಸ್ಥಳಾವಕಾಶ ಇರದೆ ತೊಂದರೆ ಅನುಭವಿಸಿದ್ದ ರೈತರಿಗೆ ಕೆಎಂಎಫ್ ಸಂತಸದ ಸುದ್ದಿ ನೀಡಿದೆ. ತನ್ನ ಮಳಿಗೆಗಳ ಬಳಿ ಹಣ್ಣು ಮತ್ತು ತರಕಾರಿ ಮಾರಲು ರೈತರಿಗೆ ಕೆಎಂಎಫ್ ಅವಕಾಶ ನೀಡಿದೆ.

Advertisement

ಸಾಕಷ್ಟು ರೈತರು ಸ್ವತಃ ತಾವೇ ಹಣ್ಣು, ತರಕಾರಿ ಮಾರಾಟ ಮಾಡುತ್ತೇವೆ, ಆದರೆ ಸ್ಥಳಾವಕಾಶ ಇಲ್ಲ ಎಂದು ಸಾಕಷ್ಟುಬಾರಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನಂದಿನಿ ಮಳಿಗೆಗಳ ಪಕ್ಕದಲ್ಲಿ ತರಕಾರಿ, ಹಣ್ಣು ಮಾರಾಟಕ್ಕೆ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿತ್ತು. ಅದರಂತೆ ತೋಟಗಾರಿಕೆ ಇಲಾಖೆಯಿಂದ ಕೆಎಂಎಫ್ ಗೆ ಮನವಿ ಮಾಡಲಾಗಿತ್ತು. ಮನವಿಗೆ ಸ್ಪಂಧಿಸಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ನಂದಿನಿ ಮಳಿಗೆಗಳ ಬಳಿ ಹಣ್ಣು, ತರಕಾರಿ ಮಾರಾಟಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.

ಕೆಲವು ನಂದಿನಿ ಮಳಿಗೆ ಪಕ್ಕದಲ್ಲಿ ಹಾಫ್ ಕಾಮ್ಸ್ ಮಳಿಗೆಗಳಿದೆ. ಅಂತಹ ಸ್ಥಳಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ರಾಜ್ಯಾದ್ಯಂತ ಕೆಎಂಎಫ್ ಹಾಗೂ 14 ಜಿಲ್ಲಾ ಹಾಲು ಒಕ್ಕೂಟ ಸೇರಿ 1500 ಕ್ಕಿಂತ ಹೆಚ್ಚು ಮಳಿಗೆಗಳಿವೆ. ರೈತರು ಈ ಸ್ಥಳಗಳಲ್ಲಿ ಹಣ್ಣು, ತರಕಾರಿಗಳನ್ನು ನೇರವಾಗಿ ಮಾರಾಟ ಮಾಡಬಹುದು. ಹೀಗೆ ಮಾರಾಟಕ್ಕೆ ಬಂದ ರೈತರಿಗೆ ಕೆಎಂಎಫ್ ವತಿಯಿಂದ ಪ್ರತಿನಿತ್ಯ ಉಚಿತವಾಗಿ ನೀರು, ಮಜ್ಜಿಗೆ, ಸ್ಯಾನಿಟೈಸರ್, ಕೈಗವಸು (ಗ್ಲೌಸ್), ಮಾಸ್ಕ್ ಗಳನ್ನ ನೀಡಲಾಗುತ್ತದೆ.

ರೈತರು ತಮ್ಮ ತರಕಾರಿಗಳನ್ನು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆ ವರೆಗೆ ಮಾರಾಟ ಮಾಡಬಹುದು. ತೂಕದ ಯಂತ್ರ ಸೇರಿದಂತೆ ಹಣ್ಣು, ತರಕಾರಿ ಮಾರಾಟಕ್ಕೆ ಬೇಕಾದ ಇತರೆ ಸಾಮಗ್ರಿಗಳನ್ನು ರೈತರೆ ತರಬೇಕು. ಮಾರಾಟಕ್ಕೆ ಬರುವ ರೈತರಿಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಪ್ರತಿ ಹತ್ತು ಮಳಿಗೆಗೆ ಒಬ್ಬರನ್ನ ಮೇಲ್ವಿಚಾರಕರನ್ನು ನೇಮಿಸಲು ತೋಟಗಾರಿಕೆ ಇಲಾಖೆ ನಿರ್ಧರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next