ಕಲಬುರಗಿ: ಕೊರೊನಾ ಎರಡನೇ ಅಲೆಯ ಲಾಕ್‌ಡೌನ್ ಪರಿಣಾಮ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ರಾಜ್ಯ ಸರ್ಕಾರ ಎರಡು ಸಾವಿರ ರೂ. ಆರ್ಥಿಕ ನೆರವು ಘೋಷಿಸಿರುವ ಕಾರಣ ಜಿಲ್ಲೆಯ ಅರ್ಹ ಫಲಾನುಭವಿಗಳು ಇದರ ಲಾಭ ಪಡೆದುಕೊಳ್ಳಲು ಗ್ರಾಮ ಪಂಚಾಯಿತಿ ಹಂತದಲ್ಲೇ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿ ಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಅಧಿಕಾರಿಗಳಿಗೆ ಸೂಚಿಸಿದರು.
ಝೂಮ್ ಮೀಟ್ ಮೂಲಕ ಕಾರ್ಮಿಕ ಇಲಾಖೆ ಸೇರಿದಂತೆ ಭಾಗಿದಾರರ ಇಲಾಖೆ ಅ ಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ಈ ಸಂಬಂಧ ಗ್ರಾಮ ಪಂಚಾಯಿತಿ ಕಚೇರಿಯಲ್ಲಿರುವ ಡಾಟಾ ಎಂಟ್ರಿ ಆಪರೇಟರ್ ಸೇವೆ ಪಡೆಯಬೇಕು. ಸಾಮಾನ್ಯ ಸೇವಾ ಕೇಂದ್ರದ ಮೂಲಕವೇ ಅರ್ಜಿ ಸಲ್ಲಿಕೆ ಇರುವುದರಿಂದ ಈ ಸೇವೆಯನ್ನು ಪಂಚಾಯಿತಿಯಲ್ಲೇ ಒದಗಿಸಬೇಕೆಂದು ಸೂಚಿಸಿದರು. ಲಾಕ್‌ಡೌನ್ ಪರಿಹಾರ ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ದೊರಕುವಂತೆ ಅ ಧಿಕಾರಿಗಳು ಸಮರ್ಪಕವಾಗಿ ನೋಡಿಕೊಳ್ಳ ಬೇಕು. ಈ ಕುರಿತು ಟ್ರೇಡ್ ಯೂನಿಯನ್, ಕಾರ್ಮಿಕ ಸಂಘಟನೆಗಳ ಸಹಕಾರ ಪಡೆದು ಜಿಲ್ಲಾದ್ಯಂತ ಜಾಗೃತಿ ಮೂಡಿಸಬೇಕು. ಕಾರ್ಮಿಕ ವರ್ಗ ಹೆಚ್ಚಿರುವ ಪ್ರದೇಶದಲ್ಲಿ ಕ್ಯಾಂಪ್ ಆಯೋಜಿಸಿ, ಸ್ಥಳದಲ್ಲೇ ಅರ್ಜಿ ಪಡೆಯಬೇಕು. ನಗರ-ಪಟ್ಟಣ ಪ್ರದೇಶದಲ್ಲಿ ಕಾರ್ಮಿಕರು ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಸ್ಥಳೀಯ ಸಂಸ್ಥೆಗಳು ಕಾರ್ಯೋನ್ಮುಖವಾಗಬೇಕು ಎಂದು ನಿರ್ದೇ ಶನ ಮಾಡಿದರು.
ಕಾರ್ಮಿಕರಿಗೆ ವೃತ್ತಿ ಪ್ರಮಾಣ ಪತ್ರ ನೀಡಲು ಪಾಲಿಕೆ, ಸ್ಥಳೀಯ ಪೌರ ಸಂಸ್ಥೆ, ತಹಶೀಲ್ದಾರ್-ಉಪ ತಹಶೀಲ್ದಾರ್, ಪಿಡಿಒ, ಕಾರ್ಯದರ್ಶಿ, ಪರಿಸರ ಮಾಲಿನ್ಯ, ಕಾರ್ಮಿಕ ಇಲಾಖೆಯ ವಿವಿಧ ಹಂತದ ಅ ಧಿಕಾರಿಗಳಲ್ಲದೇ ಪತ್ರಾಂಕಿತ ಅಧಿ ಕಾರಿಗಳಿಗೂ ಅಧಿ ಕಾರ ನೀಡಲಾಗಿದೆ. ಕಾರ್ಮಿಕರು ಪ್ರಮಾಣ ಪತ್ರ ಕೇಳಿಬಂದಲ್ಲಿ ಆದ್ಯತೆ ಮೇಲೆ ಪ್ರಮಾಣ ಪತ್ರ ನೀಡಬೇಕು ಎಂದು ಅಧಿ ಕಾರಿಗಳಿಗೆ ಸೂಚಿಸಿದರು.
ಕಲಬುರಗಿ ಪ್ರಾದೇಶಿಕ ವಿಭಾಗದ ಕಾರ್ಮಿಕ ಉಪ ಆಯುಕ್ತ ಡಿ.ಜಿ. ನಾಗೇಶ ಮಾತನಾಡಿ, ರಾಜ್ಯ ಅಸಂಘಟಿತ ಕಾರ್ಮಿಕರ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿಯಲ್ಲಿ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಯಡಿ ನೋಂದಣಿಯಾದ 7000 ಫಲಾನುಭವಿ ಗಳನ್ನು ಹೊರತುಪಡಿಸಿ, ಜಿಲ್ಲೆಯಲ್ಲಿ ಪರಿ ಹಾರಕ್ಕೆ ಇದುವರೆಗೆ 13,323 ಅರ್ಜಿಗಳು ಬಂದಿವೆ. ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಿದ ಕೂಡಲೇ ಕಾರ್ಮಿಕ ಅ ಧಿಕಾರಿಗಳ ಲಾಗಿನ್‌ಗೆ ಬಂದು ಅಲ್ಲಿಂದ ವಿಲೇವಾರಿ ಮಾಡಲಾಗುತ್ತದೆ ಎಂದು ವಿವರಿಸಿದರು. ಜಿಲ್ಲಾ ಪಂಚಾಯಿತಿ ಸಿಇಒ ಡಾ| ದಿಲೀಷ್ ಸಸಿ, ಡಿಯುಡಿಸಿ ಯೋಜನಾ ನಿರ್ದೇಶಕ ಶಿವಶರಣಪ್ಪ ನಂದಗಿರಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿ ಕಾರಿ ರಮೇಶ ಸಂಗಾ, ಸಹಾಯಕ ಕಾರ್ಮಿಕ ಆಯುಕ್ತೆ ಆರತಿ, ಜಿಲ್ಲಾ ಕಾರ್ಮಿಕ ಅ ಧಿಕಾರಿ ಶ್ರೀಹರಿ ದೇಶಪಾಂಡೆ ಹಾಗೂ ಜಿಲ್ಲಾ ಮಟ್ಟದ ಅಧಿ ಕಾರಿಗಳು, ಕಾರ್ಮಿಕ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.