Advertisement

ಜನತಾ ಪರಿವಾರದ ನಾಲ್ವರಿಗೆ ಅವಕಾಶ

11:20 PM Aug 20, 2019 | Lakshmi GovindaRaj |

ಬೆಂಗಳೂರು: ಜನತಾಪರಿವಾರ ಮೂಲದ ನಾಲ್ವರು ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಅನುಭವ ಹಾಗೂ ಹಿರಿತನದ ಆಧಾರದ ಮೇಲೆ ಅವಕಾಶ ಪಡೆದಿದ್ದಾರೆ. ಗೋವಿಂದ ಕಾರಜೋಳ, ಬಸವರಾಜ ಬೊಮ್ಮಾಯಿ, ಜೆ.ಸಿ.ಮಾಧುಸ್ವಾಮಿ, ವಿ.ಸೋಮಣ್ಣ ಅವರು ಸಚಿವರಾಗಿದ್ದಾರೆ.

Advertisement

ಗೋವಿಂದ ಕಾರಜೋಳ ಅವರು ಜನತಾಪರಿವಾರದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದು ರಾಮಕೃಷ್ಣ ಹೆಗಡೆ, ಜೆ.ಎಚ್‌.ಪಟೇಲ್‌, ಎಸ್‌.ಆರ್‌.ಬೊಮ್ಮಾಯಿ ಅವರಿಗೆ ಹತ್ತಿರವಾಗಿದ್ದರು. ಜನತಾದಳ ಇಬ್ಭಾಗದ ನಂತರ ವಿಜಯಪುರ-ಬಾಗಲಕೋಟೆ ಜಿಲ್ಲೆಗಳ ನಾಯಕರ ಜತೆ ಬಿಜೆಪಿ ಸೇರಿದ್ದರು. ಹಿಂದಿನ ಬಿಜೆಪಿ ಸರ್ಕಾರದಲ್ಲೂ ಸಚಿವರಾಗಿದ್ದರು.

ಮಾಜಿ ಮುಖ್ಯಮಂತ್ರಿ ಎಸ್‌.ಆರ್‌.ಬೊಮ್ಮಾಯಿ ಅವರ ಪುತ್ರ ಬಸವರಾಜ ಬೊಮ್ಮಾಯಿ ಆವರು ಜನತಾದಳದಲ್ಲಿದ್ದು ಎಚ್‌.ಡಿ.ದೇವೇಗೌಡ, ಸಿದ್ದರಾಮಯ್ಯ, ಎಂ.ಪಿ.ಪ್ರಕಾಶ್‌ ಗರಡಿಯಲ್ಲಿ ಪಳಗಿದವರೇ. ಜನತಾದಳ ಇಬ್ಭಾಗವಾದಾಗ ಸಂಯುಕ್ತ ಜನತಾದಳದಲ್ಲಿ ಗುರುತಿಸಿಕೊಂಡು ನಂತರ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಜೆ.ಸಿ.ಮಾಧುಸ್ವಾಮಿ ಸಹ ಸಂಯುಕ್ತ ಜನತಾದಳದಲ್ಲಿದ್ದು ನಂತರ ಬಿಜೆಪಿ ಸೇರಿದ್ದರು. ವಿ.ಸೋಮಣ್ಣ ಅವರು ಜನತಾದಳದಿಂದ ಕಾಂಗ್ರೆಸ್‌ಗೆ ಹೋಗಿ ನಂತರ ಬಿಜೆಪಿ ಸೇರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next