Advertisement

ರೈತರಿಂದಲೇ ಸ್ವಯಂ ಬೆಳೆ ಸಮೀಕ್ಷೆಗೆ ಅವಕಾಶ

02:53 PM Aug 10, 2020 | Suhan S |

ಚಿತ್ರದುರ್ಗ: 2020-21ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಯೋಜನೆ ಆ. 7 ರಿಂದ ಜಾರಿಗೆ ಬಂದಿದೆ. ಜಿಲ್ಲೆಯ ರೈತರು ತಮ್ಮ ಜಮೀನುಗಳ ಸರ್ವೆ ನಂ, ಹಿಸ್ಸಾ ನಂಬರ್‌ವಾರು ಬೆಳೆದ ಬೆಳೆಗಳ ಹಾಗೂ ತಮ್ಮ ಜಮೀನಿನಲ್ಲಿರುವ ಬಹುವಾರ್ಷಿಕ ತೋಟಗಾರಿಕೆ, ಅರಣ್ಯ, ಇತರೆ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ತಮ್ಮ ಅಂಡ್ರಾಯ್ಡ್ ಮೊಬೈಲ್‌ ಮೂಲಕ ಗೂಗಲ್‌ ಪ್ಲೇ ಸ್ಟೋರ್‌ನಲ್ಲಿ ಬೆಳೆ ಸಮೀಕ್ಷೆ- 2020 ಆ್ಯಪ್‌ ಡೌನ್‌ ಲೋಡ್‌ ಮಾಡಿಕೊಳ್ಳುವ ಸ್ವತಃ ತಾವೇ ಬೆಳೆ ಸಮೀಕ್ಷೆ ಮೂಲಕ ನಮೂದಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Advertisement

ಬೆಳೆ ಸಮೀಕ್ಷೆ ದತ್ತಾಂಶವನ್ನು ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆಗಳ ವಿಸ್ತೀರ್ಣವನ್ನು ಲೆಕ್ಕ ಹಾಕುವ ಕಾರ್ಯದಲ್ಲಿ ಬೆಳೆ ವಿಮೆ ಯೋಜನೆಯ ಸರ್ವೆ ನಂಬರ್‌ವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು ಸರ್ವೇ ನಂಬರ್‌ ಆಯ್ಕೆ ಮಾಡಲು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿಲು, ಆರ್‌ಟಿಸಿಯಲ್ಲಿ ಬೆಳೆ ವಿವರ ದಾಖಲಾತಿಗಾಗಿ, ಪ್ರಕೃತಿ ವಿಕೋಪ ಸಂದರ್ಭಗಳಲ್ಲಿ ಎನ್‌ಡಿಆರ್‌ಎಫ್‌ ಮತ್ತು ಎಸ್‌ಟಿಆರ್‌ಎಫ್‌ ಅಡಿ ಸಹಾಯಧನ ನೀಡಲು, ಹಾನಿಗೊಳಗಾದ ಬೆಳೆ ವಿಸ್ತೀರ್ಣದ ಮಾಹಿತಿ ಸಿದ್ಧಪಡಿಸುವಲ್ಲಿ ಮತ್ತು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವ ಸಂದರ್ಭದಲ್ಲಿ ಬೆಳೆ ಸಮೀಕ್ಷೆಯ ಮಾಹಿತಿಯನ್ನೇ ಆಧಾರವಾಗಿಟ್ಟುಕೊಳ್ಳಲಾಗುವುದು. ಆದ್ದರಿಂದ ರೈತರು ತಪ್ಪದೇ ತಮ್ಮ ಜಮೀನಿನಲ್ಲಿರುವ ಕೃಷಿ, ತೋಟಗಾರಿಕೆ, ಅರಣ್ಯ, ರೇಷ್ಮೆ ಇತರೆ ಬೆಳೆಗಳ ವಿವರಗಳನ್ನು ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ನಮೂದಿಸಬೇಕು. ಜಿಲ್ಲೆಯ ವಿವಿಧ ಹಳ್ಳಿಗಳಲ್ಲಿರುವ ವಿದ್ಯಾವಂತ ಯುವಕರು ಬೆಳೆ ಸಮೀಕ್ಷೆ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಳ್ಳುವ ಮೂಲಕ ತಮ್ಮ ಹಳ್ಳಿಯ ರೈತರಿಗೆ ಬೆಳೆಗಳನ್ನು ತಂತ್ರಾಂಶದ ಮೂಲಕ ದಾಖಲಿಸಲು ಸಹಕರಿಸಬೇಕು ಎಂದು ಅವರು ಕೋರಿದ್ದಾರೆ.

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ವಿವರಗಳನ್ನು ಆ. 10 ರಿಂದ 24 ರೊಳಗೆ ಅಪ್‌ ಲೋಡ್‌ ಮಾಡಲು ಕಾಲಾವ ಧಿಯನ್ನು ನಿಗದಿ ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸಹಾಯಕ ತೋಟಗಾರಿಕೆ ಅಧಿಕಾರಿಗಳು, ರೇಷ್ಮೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದು. ನಿಗದಿತ ಸಮಯದೊಳಗೆ ಬೆಳೆಯ ಮಾಹಿತಿಯನ್ನು ಅಪ್‌ಲೋಡ್‌ ಮಾಡದೇ ಇದ್ದ ಪಕ್ಷದಲ್ಲಿ ಖಾಸಗಿ ನಿವಾಸಿಗಳ ಸಹಾಯದಿಂದ ತಮ್ಮ ಜಮೀನುಗಳ ಬೆಳೆ ಮಾಹಿತಿಯನ್ನು ಛಾಯಾಚಿತ್ರದೊಂದಿಗೆ ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ಬೆಳೆ ಸಮೀಕ್ಷೆ ಕಾಲಾವ  ಆ. 24 ಮುಕ್ತಾಯವಾದ ನಂತರ ಅಪ್‌ಲೋಡ್‌ ಮಾಡಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next