Advertisement

ಸ್ಪರ್ಧಾತ್ಮಕ ಪೈಪೋಟಿಗೆ ವಿದ್ಯಾರ್ಥಿಗಳಿಗೆ ಅವಕಾಶ

12:45 PM Jan 23, 2022 | Team Udayavani |

ಹಾನಗಲ್ಲ: ತಂತ್ರಜ್ಞಾನ ಕ್ಷೇತ್ರದಲ್ಲಿ ಜಗತ್ತು ವೇಗವಾಗಿ ಬೆಳೆಯುತ್ತಿರುವ ಇಂದಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಭವ್ಯ ಭಾರತದ ಕನಸನ್ನು ಸಾಕಾರ ಮಾಡುವ ಹೊಸ ಯೋಜನೆ ಜಾರಿಗೊಳಿಸಿ, ಸ್ಪರ್ಧಾತ್ಮಕವಾಗಿ ಪೈಪೋಟಿ ನಡೆಸಲು ವಿದ್ಯಾರ್ಥಿಗಳಿಗೆ ಅವಕಾಶ ಒದಗಿಸಿದ್ದಾರೆ ಎಂದು ಸಂಸದ ಶಿವಕುಮಾರ ಉದಾಸಿ ತಿಳಿಸಿದರು.

Advertisement

ತಾಲೂಕಿನ ಯಳವಟ್ಟಿ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ಕೇಂದ್ರ ಸರಕಾರದ ನೀತಿ ಆಯೋಗದ ಅಟಲ್‌ ಇನ್ನೋವೇಶನ್‌ ಮಿಶನ್‌ನಡಿ ನೀಡಲಾದ “ಅಟಲ್‌ ಟೆಂಕರಿಂಗ್‌ ಲ್ಯಾಬ್‌’ ಉದ್ಘಾಟಿಸಿ ಮಾತನಾಡಿದ ಅವರು, ಬದಲಾದ ಸನ್ನಿವೇಶದಲ್ಲಿ ಕೇಂದ್ರ ಸರಕಾರ ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರಲು ಅಟಲ್‌ ಟಿಂಕರಿಂಗ ಲ್ಯಾಬ್‌ ನೀಡಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಮುಂದಾಗಿದೆ. ಇದಕ್ಕಾಗಿ ಸರಕಾರ 20 ಲಕ್ಷ ರೂ. ಅನುದಾನ ನೀಡುತ್ತಿದೆ. 10 ಲಕ್ಷ ರೂ.ಗಳನ್ನು ಪರಿಸರ ನಿರ್ಮಾಣಕ್ಕೆ ನೀಡಲಾಗುತ್ತದೆ.

ಉಳಿದ 10 ಲಕ್ಷ ರೂ.ಗಳನ್ನು ನಿರ್ವಹಣೆಗಾಗಿ ಪ್ರತಿವರ್ಷ 2 ಲಕ್ಷ ರೂ.ನಂತೆ ನೀಡಲಾಗುತ್ತದೆ. ಈ ಲ್ಯಾಬ್‌ನಿಂದ ವಿದ್ಯಾರ್ಥಿಗಳಿಗೆ ಸಿದ್ದಾಂತದೊಂದಿಗೆ ಪ್ರಾಯೋಗಿಕವಾಗಿ ಅರಿಯುವ ಅವಕಾಶ ಲಭ್ಯವಾಗುತ್ತದೆ. ಇದರಿಂದ ವಿದ್ಯಾರ್ಥಿಗಳು ತಮ್ಮ ಬುದ್ಧಿವಂತಿಕೆ ಪ್ರದರ್ಶಿಸಲು ಸಾಧ್ಯವಾಗುತ್ತದೆ ಎಂದರು. ನಮ್ಮ ದೇಶದ ವಿದ್ಯಾರ್ಥಿಗಳಲ್ಲಿನ ಕೌಶಲವನ್ನು ಉತ್ತೇಜಿಸುವ ಉದ್ದೇಶ ಸರಕಾರದ್ದಾಗಿದೆ. ಈ ನಿಟ್ಟಿನಲ್ಲಿ 10 ಸಾವಿರ ಟೆಂಕರಿಂಗ್‌ ಲ್ಯಾಬ್‌ ನೀಡುವ ಗುರಿ ಹೊಂದಿದ್ದು, ಈಗಾಗಲೇ 8,706 ಲ್ಯಾಬ್‌ ನೀಡುವ ಮೂಲಕ 70 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳನ್ನು ತಲುಪಿದ್ದೇವೆ. ಈ ಮೂಲಕ ವಿದ್ಯಾರ್ಥಿಗಳಿಂದ 1.80 ಲಕ್ಷ ಅನ್ವೇಷಣೆ ಮಾಡಿದ ದಾಖಲೆಯಾಗಿದೆ. ಇದರೊಂದಿಗೆ ಸ್ಟಾರ್‌rì ಆಫ್‌ ಇಂಡಿಯಾ ಯೋಜನೆ ಆರಂಭಿಸಲಾಗುತ್ತಿದೆ. ಈ ಅವಕಾಶವನ್ನು ಮಕ್ಕಳು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಬಾಯಿಪಾಠ ಮಾಡುವುದನ್ನು ಬಿಟ್ಟು ಪ್ರಾಯೋಗಿಕವಾಗಿ ಚಿಂತನೆ ನಡೆಸಬೇಕು.

ತಂತ್ರಜ್ಞಾನ ದುರುಪಯೋಗ ಆಗಬಾರದು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ವಿದ್ಯಾರ್ಥಿಗಳು ಪ್ರಶ್ನೆ ಕೇಳುವ ಅಭ್ಯಾಸವನ್ನು ನಿರಂತರವಾಗಿ ಬೆಳೆಸಿಕೊಳ್ಳಬೇಕು. ಶಿಕ್ಷಕರು ಕೂಡ ವಿದ್ಯಾರ್ಥಿಗಳ ಪ್ರಶ್ನೆಗೆ ಸರಿಯಾದ ಉತ್ತರ ನೀಡಬೇಕು. ವಿದ್ಯಾರ್ಥಿಗಳು ತಮ್ಮೊಳಗೆ ಲಕ್ಷ ¾ಣ ರೇಖೆ ಹಾಕಿಕೊಳ್ಳುವ ಮೂಲಕ ಪರಿಣಿತಿ ಹೊಂದಬೇಕು. ಈ ಯೋಜನೆಯಲ್ಲಿ ದೇಶದ 10 ಸಾವಿರ ಪ್ರೌಢಶಾಲೆಗಳನ್ನು ಆಯ್ಕೆ ಮಾಡಲಾಗಿದ್ದು, ಹಾವೇರಿ ಜಿಲ್ಲೆಯಲ್ಲಿ 34, ಹಾನಗಲ್ಲ ತಾಲೂಕಿನಲ್ಲಿ 4 ಅಟಲ್‌ ಟೆಂಕರಿಂಗ್‌ ಲ್ಯಾಬ್‌ಗಳನ್ನು ನೀಡಲಾಗಿದ್ದು, ಈ ಮೂಲಕ ಕೇಂದ್ರ ಸರಕಾರ ಗುಣಮಟ್ಟದ ಶಿಕ್ಷಣಕ್ಕೆ ನಾಂದಿ ಹಾಡಿದೆ ಎಂದರು. ಜಿಪಂ ಮಾಜಿ ಸದಸ್ಯ ಪದ್ಮನಾಭ ಕುಂದಾಪುರ ಮಾತನಾಡಿ, ಯಳವಟ್ಟಿ ಮೊರಾರ್ಜಿ ಮಾದರಿ ವಸತಿ ಶಾಲೆ ಮಾಜಿ ಸಚಿವ ದಿ| ಸಿ.ಎಂ. ಉದಾಸಿ ಅವರ ಕನಸಿನ ಕೂಸಾಗಿದ್ದು, ಈ ಶಾಲೆ ಮೂಲ ಸೌಲಭ್ಯ ಒದಗಿಸುವಲ್ಲಿ ಅವರ ಪಾತ್ರ ಹಿರಿದಾಗಿದೆ. ತಾಲೂಕಿನ ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರುವಲ್ಲಿ ಉದಾಸಿಯವರು ಅಪಾರ ಕೊಡುಗೆ ನೀಡಿದ್ದಾರೆ ಎಂದರು.

ಹೋತನಹಳ್ಳಿ ಸಿದ್ಧಾರೂಢ ಮಠದ ಶಂಬುಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಬಿಜೆಪಿ ತಾಲೂಕಾಧ್ಯಕ್ಷ ನಿಂಗಪ್ಪ ಗೊಬ್ಬೇರ, ಮುಖಂಡರಾದ ಶಿವಲಿಂಗಪ್ಪ ತಲ್ಲೂರ, ಸಿದ್ದಲಿಂಗಪ್ಪ ಶಂಕ್ರಿಕೊಪ್ಪ, ಚಂದ್ರಪ್ಪ ಹರಿಜನ, ರವಿರಾಜ ಕಲಾಲ, ಬಂಗಾರಪ್ಪ ಕಾಮನಹಳ್ಳಿ, ಸಿದ್ದು ಪಾಟೀಲ ಮೊದಲಾದವರು ಪಾಲ್ಗೊಂಡಿದ್ದರು. ಪ್ರಾಚಾರ್ಯ ಒ.ಬಿ. ರಾಘವೇಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಗೀತ ಶಿಕ್ಷಕ ಡಾ| ವೆಂಕಟೇಶ ಪೂಜಾರ ಸ್ವಾಗತಿಸಿದರು. ಎಫ್‌.ಬಿ. ಈಳಿಗೇರ ನಿರ್ವಹಿಸಿದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next