Advertisement
ನಗರದ ಗುಲಬರ್ಗಾ ವಿಶ್ವವಿದ್ಯಾಲಯದ ಡಾ|ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಮತ್ತು ಕರ್ನಾಟಕ ಉದ್ಯೋಗ ಮಿತ್ರ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ “ಉದ್ಯಮಿಯಾಗು-ಉದ್ಯೋಗ ನೀಡು’ ಕಾರ್ಯಾಗಾರದ ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ಉದ್ಯಮಿಯಾಗಲು ಮುಂದೆ ಬರುವ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದವರಿಗೆ ಶೇ.70ರಷ್ಟು ರಿಯಾಯಿತಿ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಶೇ.75ರಷ್ಟು ರಿಯಾಯಿತಿಯನ್ನು ಸರ್ಕಾರ ನೀಡುತ್ತಿದೆ. ಕೈಗಾರಿಕೆಗಳಿಗೆ ಶೇ.30ರಷ್ಟು ತೆರಿಗೆ ಸಹ ವಿನಾಯಿತಿ ನೀಡಲಾಗುತ್ತಿದೆ. ಇವುಗಳ ಸದ್ಬಳಕೆ ಮಾಡಿಕೊಳ್ಳಬೇಕೆಂದು ಸಚಿವರು ಹೇಳಿದರು.
ಸಂಸದ ಡಾ|ಉಮೇಶ ಜಾಧವ್ ಮಾತನಾಡಿದರು. ಈ ಭಾಗದ ಜಿಲ್ಲೆಗಳಲ್ಲೂ ಈ ಕಾರ್ಯಾಗಾರದ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿತ್ತು. ಸುಮಾರು ಐದು ಸಾವಿರ ವಿದ್ಯಾರ್ಥಿಗಳು, ಯುವ ಉದ್ಯಮಿಗಳು, ಉದ್ಯೋಗಾಂಕ್ಷಿಗಳು ನೇರ ಪ್ರಸಾರದ ಮೂಲಕ ಭಾಗವಹಿಸಿದ್ದರು. ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅಧ್ಯಕ್ಷತೆ ವಹಿಸಿದ್ದರು. ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಕೆಕೆಆರ್ ಟಿಸಿ ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ, ಶಶೀಲ್ ನಮೋಶಿ, ಕ್ರೆಡಲ್ ಅಧ್ಯಕ್ಷ ಚಂದು ಪಾಟೀಲ ಇತರರಿದ್ದರು.ಕೈಗಾರಿಕಾ ಅದಾಲತ್ “ಉದ್ಯಮಿಯಾಗು-ಉದ್ಯೋಗ ನೀಡು’ ಕಾರ್ಯಾಗಾರದ ನಂತರ ಮಧ್ಯಾಹ್ನ ಕೈಗಾರಿಕಾ ಅದಾಲತ್ ನಡೆಯಿತು. ಇದರಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳಿಂದ 78 ಅರ್ಜಿಗಳು ಬಂದಿದ್ದವು. ಈ ಅರ್ಜಿಗಳನ್ನು ಪರಿಶೀಲಿಸಿ ಸಲಹೆ ನೀಡಲಾಯಿತು. ಕೆಲವು ಅರ್ಜಿಗಳ ಇತ್ಯರ್ಥ ಮಾಡುವುದಾಗಿ ಇಲಾಖೆಯ ಅಧಿಕಾರಿಗಳು ಭರವಸೆ ನೀಡಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಲವಾರು ಅವಕಾಶಗಳು ಇದ್ದರೂ ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಆಸಕ್ತಿ ತೋರಿಸುತ್ತಿಲ್ಲ. ಈ ಭಾಗದ ಸ್ಥಳೀಯರ ಒಂದೇ ಒಂದು ಬೃಹತ್ ಕೈಗಾರಿಕೆಗಳು ಇಲ್ಲ. ಈ ಬಗ್ಗೆ ಅವಲೋಕನ ಮಾಡಿಕೊಳ್ಳುವುದು ಅಗತ್ಯವಾಗಿದೆ. -ಮುರುಗೇಶ ನಿರಾಣಿ, ಕೈಗಾರಿಕಾ ಸಚಿವ