Advertisement

ವಿಪಕ್ಷಗಳ ಟೀಕೆಗಳಿಗೆ ಲಸಿಕೆ ಮೂಲಕ ಉತ್ತರ ನೀಡಿದ್ದೇವೆ: ಕಟೀಲ್

06:42 PM Oct 21, 2021 | Team Udayavani |

ಮೈಸೂರು: ಜಗತ್ತಿನ ಎಲ್ಲಾ ದೇಶಗಳು ಲಸಿಕೆ ಹುಡುಕುವ ಕೆಲಸ ಮಾಡಿದವು. ಆದರೆ ಪ್ರಧಾನಿಯವರು ವೈದ್ಯರಿಗೆ ಧೈರ್ಯ ತುಂಬುವ ಕೆಲಸ‌ ಮಾಡಿದರು. ವಿಜ್ಞಾನಿಗಳಿಗೆ ಪ್ರೇರಣೆ ನೀಡಿ ಲಸಿಕೆ ಸಂಶೋಧನೆಗೆ ಉತ್ಸಾಹ ತುಂಬಿದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

Advertisement

ಮೈಸೂರಿನ ನಜರ್‌ಬಾದ್ ಪಾರ್ಕ್‌ನಲ್ಲಿ ಗುರುವಾರ ನಡೆದ 100 ಕೋಟಿ ಭಾರತೀಯರಿಗೆ ಉಚಿತ ಲಸಿಕೆ ನೀಡಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಿಂದೆ ದೇಶದಲ್ಲಿ ವ್ಯಾಪಕವಾಗಿ ಪೊಲೀಯೊ ಬಂತು. ಅದಕ್ಕೆ ಲಸಿಕೆ ಹುಡುಕುವ ಕೆಲಸವನ್ನ ಕಾಂಗ್ರೆಸ್ ಮಾಡಲಿಲ್ಲ. ಆದರೆ ಕೋವಿಡ್ ಸಮಯದಲ್ಲಿ ಮೋದಿ 20ಗಂಟೆ ಕೆಲಸ ಮಾಡಿದ್ದಾರೆ ಎಂದರು.

ನರೇಂದ್ರ ಮೋದಿ ಅವರ ಪ್ರೇರಣೆಯಿಂದ ಲಸಿಕಾ ಅಭಿಯಾನ ಸಾಧನೆ ಮಾಡಿದೆ. ಇದಕ್ಕಾಗಿ ದೇಶದ ವಿಜ್ಞಾನಿಗಳಿಗೆ, ತಜ್ಞರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹಳ್ಳಿಹಳ್ಳಿಗೆ ಲಸಿಕೆ ತಲುಪಿಸಿದ ವೈದ್ಯರು, ದಾದಿಯರು, ಆಶಾಕಾರ್ಯಕರ್ತೆಯರಿಗೆ ಅಭಿನಂದನೆಗಳು. ಪೌರಕಾರ್ಮಿಕರು, ಪೊಲೀಸರಿಗೂ ಅಭಿನಂದನೆ ಸಲ್ಲಿಸಬೇಕು. ಇಂದು 100ಕೋಟಿ ಲಸಿಕಾ ಅಭಿಯಾನ ಪೂರ್ಣಗಿಳಿಸಲಾಗಿದೆ. 70ಕೋಟಿ ಜನರಿಗೆ ಮೊದಲ ಡೋಸ್ ಹಾಗೂ 30ಕೋಟಿ ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ವಿರೋಧ ಪಕ್ಷಗಳ ಟೀಕೆಗೆ ಲಸಿಕೆ ನೀಡುವ ಮೂಲಕ ಉತ್ತರ ನೀಡಲಾಗಿದೆ. ಲಸಿಕಾ ಅಭಿಯಾನದಲ್ಲಿ ಭಾರತ ಇತಿಹಾಸ ಸೃಷ್ಠಿಸಿದೆ ಎಂದರು.

ಇದನ್ನೂ ಓದಿ: ದೇಶದ ಶೇ.95ರಷ್ಟು ಜನರಿಗೆ ಪೆಟ್ರೋಲ್ ಅಗತ್ಯವೇ ಇಲ್ಲ: ಬೆಲೆ ಏರಿಕೆಗೆ ಸಚಿವರ ಪ್ರತಿಕ್ರಿಯೆ

Advertisement

ಪ್ರಾರಂಭದಲ್ಲಿ ಮಾಸ್ಕ್, ಸ್ಯಾನಿಟೈಸರ್, ಕೋವಿಡ್ ಕಿಟ್ ಇಲ್ಲ ಎಂದು ಚರ್ಚೆ ಆಯಿತು. ಆದರೆ ಕೇವಲ ಎರಡೇ ತಿಂಗಳಲ್ಲಿ ಉತ್ಪಾದನೆ ಹೆಚ್ಚಿಸಿ ಬೇರೆ ಬೇರೆ ದೇಶಗಳಿಗೂ ರಫ್ತು ಮಾಡಿದ್ದೇವೆ. ಸುದೀರ್ಘ 60 ವರ್ಷಗಳ ಆಡಳಿತ ಮಾಡಿದ ಕಾಂಗ್ರೆಸ್ ವೈದ್ಯಕೀಯ ಕ್ಷೇತ್ರ ಅಭಿವೃದ್ಧಿ ಪಡಿಸಲಿಲ್ಲ. ಆದರೆ ಇಂದು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೂ ವೆಂಟಿಲೇಟರ್ ಇದೆ. ಪ್ರತಿ ಜಿಲ್ಲೆಯಲ್ಲೂ ಆಕ್ಸಿಜನ್ ಫ್ಲಾಂಟ್ ನಿರ್ಮಾಣ ಮಾಡಿದೆ. ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನೂ ಮೇಲ್ದರ್ಜೆಗೆ ಏರಿಸುವ ತೀರ್ಮಾನ ಮಾಡಲಾಗಿದೆ. ಇದು ನರೇಂದ್ರ ಮೋದಿಯಿಂದ ಸಾಧ್ಯವಾಗಿದೆ. ಕರ್ನಾಟಕ ಸರ್ಕಾರಕ್ಕೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಅತ್ಯುನ್ನತ ಕೋವಿಡ್ ನಿರ್ವಹಣೆ ರಾಜ್ಯ ಕರ್ನಾಟಕ. ಕರ್ನಾಟಕದಲ್ಲಿ ಸುಮಾರು 4ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಇದಕ್ಕೆ ಕಾರಣರಾದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಹಾಲಿ ಸಿಎಂ ಬಸವರಾಜ ಬೊಮ್ಮಾಯಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.

ಸ್ವಾತಂತ್ರ್ಯಕ್ಕೂ ಮುಂಚೆ ಜನ ಗಾಂಧಿಜಿ ಜೊತೆ ಕೈಜೋಡೊಸಿದರು. ಸ್ವಾತಂತ್ರ್ಯದ ನಂತರ ಲಾಲ್ ಬಹದ್ದೂರ್ ಕೂಗಿಗೆ ಕೈಜೋಡೊಸಿದರು. ನಂತರದ ದಿನಗಳಲ್ಲಿ ಜನರು ಒಗ್ಗಟ್ಟಾಗಿ ಕೈ ಜೋಡಿಸಿದರು. ಧರ್ಮ, ಜಾತಿ, ಪಂಥ ಮೀರಿ ಜನ ಮೋದಿಯನ್ನು ಬೆಂಬಲಿಸಿದ್ದಾರೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next