Advertisement
ಸಿದ್ದರಾಮಯ್ಯ ಅವರಿಗೆ ವಿಪಕ್ಷ ನಾಯಕನ ಸ್ಥಾನ ನೀಡುವ ಬಗ್ಗೆ ಮೂಲ ಕಾಂಗ್ರೆಸಿಗರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಅದಕ್ಕೆ ಪ್ರತಿಯಾಗಿ ತನ್ನನ್ನು ಪರಿಗಣಿಸ ದಿದ್ದರೆ ಮುಂಬರುವ ಉಪ ಚುನಾವಣೆಯಲ್ಲಿ ತಾನು ತಟಸ್ಥ ಧೋರಣೆ ತಾಳುವ ಬಗ್ಗೆ ಹೈಕಮಾಂಡ್‌ಗೆ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದ್ದು, ಇದೇ ಕಾರಣಕ್ಕೆ ವಿಪಕ್ಷ ನಾಯಕನ ಆಯ್ಕೆ ವಿಷಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ಗೊಂದಲಕ್ಕೆ ಸಿಲುಕಿದೆ.
ಮಾಜಿ ಸಚಿವ ಹಾಗೂ ಹಿರಿಯ ನಾಯಕರಾಗಿರುವ ಎಚ್.ಕೆ. ಪಾಟೀಲ್ ವಿಪಕ್ಷ ನಾಯಕನ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದು, ಪ್ರಮುಖವಾಗಿ ಮೂಲ ಕಾಂಗ್ರೆಸಿಗರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್. ಮುನಿಯಪ್ಪ , ಎಂ. ವೀರಪ್ಪ ಮೊಲಿ, ಬಿ.ಕೆ. ಹರಿಪ್ರಸಾದ್ ಸಹಿತ ರಾಜ್ಯಸಭೆ ಸದಸ್ಯರು ಎಚ್.ಕೆ. ಪಾಟೀಲ್ ಪರವಾಗಿ ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.