Advertisement
ಸೋಮವಾರ ವಿಪಕ್ಷ ನಾಯಕನ ಆಯ್ಕೆ ಸಂಬಂಧ ವೀಕ್ಷಕರಾಗಿ ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯ ಮತ್ತು ವಿನೋದ್ ತಾವಡೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ್ದು, ಕೇಂದ್ರ ವೀಕ್ಷಕರು ಆಗಮಿಸಲಿದ್ದಾರೆ ಎಂಬ ಮಾಹಿತಿ ನೀಡಿದರು.
Related Articles
Advertisement
ರವಿವಾರ ಸಂಜೆ ನಾಲ್ಕು ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಾಜಿ ಮುಖ್ಯ
ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಧ್ಯೆ ಸಮಾಲೋಚನೆ ನಡೆದು ರಾತ್ರಿ ವೇಳೆಗೆ ಹೆಸರು ಪ್ರಕಟಗೊಳ್ಳಬಹುದು ಎಂಬ ನಿರೀಕ್ಷೆಯಿತ್ತು. ಆದರೆ ಮಹಾರಾಷ್ಟ್ರದಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದ ಕಾರಣ ಕರ್ನಾಟಕದ ವಿಚಾರ ಮುಂದೂಡಲ್ಪಟ್ಟಿತು. ಈ ಹಿನ್ನೆಲೆಯಲ್ಲಿ ಸಂಜೆ ವಾಪಸ್ ಬೆಂಗಳೂರಿಗೆ ಹಿಂದಿರುಗುವ ಯೋಚನೆಯಲ್ಲಿದ್ದ ಯಡಿ ಯೂರಪ್ಪ ದಿಲ್ಲಿಯಲ್ಲೇ ಉಳಿದುಕೊಂಡರು.
ಪಕ್ಷದ ಉನ್ನತ ಮೂಲಗಳ ಪ್ರಕಾರ ಬೊಮ್ಮಾಯಿ, ಆರಗ ಜ್ಞಾನೇಂದ್ರ ಮತ್ತು ಸುನಿಲ್ ಕುಮಾರ್ ಹೆಸರುಗಳು ಅಂತಿಮ ಪಟ್ಟಿಯಲ್ಲಿವೆ. ಈ ಪೈಕಿ ಬೊಮ್ಮಾಯಿ ಹೆಸರು ಮುಂಚೂಣಿಯಲ್ಲಿದೆ ಎಂದು ಹೇಳಲಾಗುತ್ತಿದೆ.
ಈ ಮಧ್ಯೆ ಮಾಜಿ ಸಿಎಂ ಯಡಿಯೂರಪ್ಪ ಅವರು ರಾತ್ರಿ 9ರ ವೇಳೆಗೆ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ ಬಳಿಕ ಅಮಿತ್ ಶಾ ಅವರನ್ನು ಭೇಟಿ ಮಾಡಿದರು. ಬಳಿಕ ಮಾಧ್ಯಮಗಳ ಜತೆಗೆ ಮಾತನಾಡಿದರು.
ಯಾರು ಮೇಲ್ಮನೆ ವಿಪಕ್ಷ ನಾಯಕ ?
ವಿಧಾನ ಪರಿಷತ್‌ನ ವಿಪಕ್ಷ ನಾಯಕ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಗಳಿಗೂ ಆಯ್ಕೆ ನಡೆಯಬೇಕಿದ್ದು, ವಿಧಾನಸಭೆಯ ವಿಪಕ್ಷ ನಾಯಕನ ಆಯ್ಕೆಯ ಜತೆಗೆ ಈ ಹುದ್ದೆಗಳ ಆಯ್ಕೆಯೂ ತಳಕು ಹಾಕಿಕೊಂಡಿದೆ. ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡೇ ಈ ಮೂರು ಸ್ಥಾನಗಳಿಗೆ ನೇಮಕ ನಡೆಯ ಲಿವೆ. ಆದ್ದರಿಂದ ಈ ಮೂರು ಸ್ಥಾನ ಗಳೊಂದಿಗೆ ಬಿಜೆಪಿಯ ಭವಿಷ್ಯದ ನಾಯ ಕತ್ವದ ಬಗ್ಗೆಗಿನ ಹೈಕಮಾಂಡ್‌ನ ಒಲವು, ನಿಲುವುಗಳು ಪ್ರಕಟವಾಗಲಿದೆ ಎಂದು ಬಿಜೆಪಿ ನಾಯಕರು ಅಭಿಪ್ರಾಯ ಪಟ್ಟಿದ್ದಾರೆ.