Advertisement

ದೆಹಲಿಯಲ್ಲಿ ಪಾಳೆಯಗಾರ, ಕರ್ನಾಟಕದಲ್ಲಿ ಮಾಂಡಲಿಕ: ಮೋದಿ, BSY ವಿರುದ್ಧ ಕಿಡಿಕಾರಿದ ಸಿದ್ದು

12:11 PM Apr 10, 2021 | Team Udayavani |

ಬೆಂಗಳೂರು: ರಾಜ್ಯದ ಬಿಜೆಪಿ ಸರ್ಕಾರ ನಗರಗಳಲ್ಲಿ ರಾತ್ರಿ ಕರ್ಪ್ಯೂಹೇರಲು ಕೈಗೊಂಡಿರುವ ಕ್ರಮ, ಕೋವಿಡ್  ಓಡಿಸಲು ತಟ್ಟೆ ಬಡಿಯಲು ಪ್ರಧಾನಿ  ನರೇಂದ್ರ ಮೋದಿಯವರು ನೀಡಿದ್ದ ಕರೆಯಷ್ಟೇ  ಬಾಲಿಷ ಕ್ರಮ. ದೆಹಲಿಯಲ್ಲೊಬ್ಬರು ಪಾಳೆಯಗಾರ, ಕರ್ನಾಟಕದಲ್ಲೊಬ್ಬರು ಮಾಂಡಲಿಕ, ಭಲೇ  ಜೋಡಿ ಎಂದು ವಿರೋಧಪಕ್ಷದ ನಾಯಕರಾದ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

Advertisement

ರಾತ್ರಿ ತೆರೆದಿರುವ ಹೊಟೇಲ್, ಚಿತ್ರಮಂದಿರ ಮತ್ತು ಅಂಗಡಿಮುಂಗಟ್ಟುಗಳನ್ನು ಮುಚ್ಚಿದರೆ ಸಾಲದೇ?  ಕೋವಿಡ್ ನಿಯಂತ್ರಣಕ್ಕೆ ಯಾವ ರೀತಿಯಲ್ಲಿಯೂ ಉಪಯೋಗವಾಗದ ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂವಿನ ನಾಟಕ ಯಾಕೆ? ಎಂದು ಪ್ರಶ್ನಿಸಿದ ಅವರು, ಕೋವಿಡ್  ನಿಯಂತ್ರಿಸುವ ಪ್ರಾಮಾಣಿಕ ಇಚ್ಚೆ ಮುಖ್ಯಮಂತ್ರಿಗಳು ಹೊಂದಿದ್ದರೆ, ಮೊದಲು ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕ್ರಮಕೈಗೊಳ್ಳಬೇಕು, ಕೋವಿಡ್ ಪರೀಕ್ಷೆ ಹೆಚ್ಚಿಸಬೇಕು ಸೋಂಕಿತರಿಗೆ ತಕ್ಷಣ ಚಿಕಿತ್ಸೆ ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಪಶ್ಚಿಮಬಂಗಾಳ: ಮತಗಟ್ಟೆ ಬಳಿ ಮತದಾರನಿಗೆ ಗುಂಡಿಕ್ಕಿ ಹತ್ಯೆ, ಬಿಜೆಪಿ-ಟಿಎಂಸಿ ಘರ್ಷಣೆ

ಕೋವಿಡ್ ವ್ಯಾಕ್ಸಿನ್ ಪ್ರಾರಂಭಿಸಿ 80 ದಿನಗಳು ಕಳೆದರೂ ಕೇವಲ ಶೇಕಡಾ ಒಂದರಷ್ಟು ಜನಸಂಖ್ಯೆಗೆ ಮಾತ್ರ ನೀಡಲು ಸಾಧ್ಯವಾಗಿದೆ. ರಾಜ್ಯದಲ್ಲಿ ಈಗಾಗಲೇ ವ್ಯಾಕ್ಸಿನ್ ಕೊರತೆಯ ದೂರು ಕೇಳಿಬರತೊಡಗಿದೆ. ಗಿಮಿಕ್‌ಗಳನ್ನು ಬಿಟ್ಟು ಈ ಕಡೆ ಗಮನಹರಿಸಿ.

ದೇಶದ ಪ್ರಧಾನಿಯ ಅಂಧಾ ದರ್ಬಾರ್‌ನಿಂದ ರಾಜ್ಯದ ಮುಖ್ಯಮಂತ್ರಿಗಳು ಸ್ಪೂರ್ತಿ ಪಡೆದರೆ, ಮುಖ್ಯಮಂತ್ರಿಗಳಿಂದ ಪ್ರೇರಣೆ ಪಡೆದು ಕೆಲವು ಜಿಲ್ಲಾಧಿಕಾರಿಗಳು ಕೋವಿಡ್ ನಿಯಂತ್ರಣದ ಹೆಸರಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳೇ, ನೀವು ಸ್ವಲ್ಪ ಬುದ್ದಿ ಕಲಿಯಿರಿ, ಅವರಿಗೂ ಸ್ವಲ್ಪ‌ ಬುದ್ದಿ ಹೇಳಿ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Advertisement

ಇದನ್ನೂ ಓದಿ: ಆರ್ ಎಸ್ ಎಸ್ ವರಿಷ್ಠ ಮೋಹನ್ ಭಾಗವತ್ ಗೆ ಕೋವಿಡ್ ದೃಢ, ಆಸ್ಪತ್ರೆಗೆ ದಾಖಲು

Advertisement

Udayavani is now on Telegram. Click here to join our channel and stay updated with the latest news.

Next