Advertisement

ಗೋವಾದಲ್ಲಿ ಕೋವಿಡ್ ರಣಕೇಕೆ: ಸರ್ಕಾರದ ವಿರುದ್ಧ ಪ್ರತಿಪಕ್ಷಗಳ  ಆಕ್ರೋಶ

08:00 PM May 01, 2021 | Team Udayavani |

ಪಣಜಿ: ಗೋವಾದಲ್ಲಿ ಕೋವಿಡ್ ಸೋಂಕು ದೃಢಪಡುತ್ತಿರುವ ಪ್ರಮಾಣ ಶೇ 51 ರಷ್ಟಿದೆ. ಇದು ದೇಶದಲ್ಲಿ ಅತ್ಯಧಿಕ ಎಂದೇ ಹೇಳಲಾಗುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಕೋವಿಡ್ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲು ಸರ್ಕಾರ ವಿಫಲವಾಗಿದೆ ಎಂದು ಪ್ರತಿಪಕ್ಷಗಳು  ಆಕ್ರೋಶ ವ್ಯಕ್ತಪಡಿಸುತ್ತಿದೆ.

Advertisement

ರಾಜ್ಯದಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಬೆಡ್‍ಗಳಿಲ್ಲದೆಯೇ ಆಸ್ಪತ್ರೆಯಲ್ಲಿ ನೆಲದ ಮೇಲೆ ಮಲಗಿ ಚಿಕಿತ್ಸೆ ಪಡೆಯುವ ದುಸ್ಥಿತಿ ಎದುರಾಗಿದೆ. ಮಡಗಾಂವ ಜಿಲ್ಲಾಸ್ಪತ್ರೆಯಲ್ಲಿ ಇಂತಹ ದೃಶ್ಯ ಸರ್ವೆಸಾಮಾನ್ಯವಾಗಿ ಕಂಡುಬರುತ್ತಿದೆ.

ರಾಜ್ಯದಲ್ಲಿ ಕೇವಲ ಸೋಂಕಿತರಷ್ಟೇ ಅಲ್ಲ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ಕೂಡ ಆತಂಕ ಸೃಷ್ಠಿಸಿದೆ. ಪ್ರತಿದಿನ 20 ಕ್ಕೂ ಹೆಚ್ಚು ಜನರು ಸೋಂಕಿಗೆ ಬಲಿಯಾಗುತ್ತಿದ್ದಾರೆ. ಗೋವಾದಲ್ಲಿಯೇ ಅತ್ಯಧಿಕ ಸೋಂಕು ಮಡಗಾಂವನಲ್ಲಿ ದೃಡಪಟ್ಟಿದೆ. ಕೇವಲ ಮಡಗಾಂವವೊಂದರಲ್ಲೇ ಪ್ರತಿದಿನ 1900 ಕ್ಕೂ ಹೆಚ್ಚು ಜನರಿಗೆ ಕೋವಿಡ್ ಸೋಂಕು ದೃಡಪಟ್ಟಿದೆ.

ಕೋವಿಡ್ ಸೋಂಕು ಹರಡುವುದನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ವೀಕೆಂಡ್ ಲಾಕ್‍ಡೌನ್ ಘೋಷಿಸಿದೆ. ಹಲವು ಆಸ್ಪತ್ರೆಗಳಲ್ಲಿ ಬೆಡ್‍ಗಳ ಸಂಖ್ಯೆಯನ್ನು ಹೆಚ್ಚಿಸುತ್ತಲೇ ಇದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಲಾಕ್‍ಡೌನ್ 15 ದಿನಗಳ ಕಾಲ ವಿಸ್ತರಣೆ ಮಾಡುವಂತೆ ಪ್ರತಿಪಕ್ಷಗಳು ಆಗ್ರಹಿಸುತ್ತಿವೆ.

Advertisement

Udayavani is now on Telegram. Click here to join our channel and stay updated with the latest news.

Next