Advertisement

ಕೇಂದ್ರ ಸರಕಾರದ ವಿರುದ್ಧ ವಿಪಕ್ಷಗಳು ಪ್ರತಿಭಟನೆಗೆ ಸಜ್ಜು

09:42 AM Nov 05, 2019 | Hari Prasad |

ಹೊಸದಿಲ್ಲಿ: ಮುಂಬರುವ ಸಂಸತ್‌ನ ಚಳಿಗಾಲದ ಅಧಿವೇಶನದಲ್ಲಿ ಆರ್ಥಿಕ ಕುಸಿತ, ಕೃಷಿ ವಲಯ ಬಿಕ್ಕಟ್ಟು, ನಿರುದ್ಯೋಗ ಮತ್ತಿತರ ಸಮಸ್ಯೆಗಳ ಕುರಿತು ಕೇಂದ್ರ ಸರಕಾರದ ವಿರುದ್ಧ ವಿಪಕ್ಷಗಳು ಜಂಟಿಯಾಗಿ ಪ್ರತಿಭಟನೆ ನಡೆಸಲಿವೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಗುಲಾಂ ನಬಿ ಆಜಾದ್‌ ತಿಳಿಸಿದ್ದಾರೆ.

Advertisement

ಸೋಮವಾರ ಅವರು ವಿಪಕ್ಷಗಳಾದ ಸಿಪಿಎಂ, ಆರ್‌ಜೆಡಿ, ಟಿಎಂಸಿ, ಡಿಎಂಕೆ, ಆರ್‌ಎಲ್‌ಡಿ ಹಿರಿಯ ನಾಯಕರ ಜತೆ ಸಭೆ ನಡೆಸಿ ಮಾತನಾಡಿದರು. ಸಭೆಗೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಎನ್‌ಸಿಪಿ ನೇತಾರ ಶರದ್‌ ಪವಾರ್‌ ಗೈರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next