Advertisement

ಗಡಿಯಲ್ಲಿ ಚೀನಾ ತಂಟೆ: ಸಂಸತ್ತಿನಲ್ಲಿ ಪ್ರತಿಭಟನೆಗೆ ಪ್ರತಿಪಕ್ಷಗಳ ಸಿದ್ದತೆ

08:32 AM Dec 13, 2022 | Team Udayavani |

ಹೊಸದಿಲ್ಲಿ: ಅರುಣಾಚಲ ಪ್ರದೇಶದ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ (ಎಲ್‌ಎಸಿ) ಭಾರತ ಮತ್ತು ಚೀನಾ ಸೈನಿಕರ ನಡುವಿನ ಘರ್ಷಣೆ ಬಗ್ಗೆ ಇಂದು ಸಂಸತ್ತಿನಲ್ಲಿ ಚರ್ಚೆ ನಡೆಸಲು ಪ್ರತಿಪಕ್ಷಗಳು ಸಜ್ಜಾಗುತ್ತಿವೆ.

Advertisement

ಡಿ.9ರ ಮುಂಜಾವಿನಲ್ಲಿ ಅರುಣಾಚಲ ಪ್ರದೇಶದ ತವಾಂಗ್‌ ಸೆಕ್ಟರ್‌ನ 17 ಸಾವಿರ ಅಡಿ ಎತ್ತರದಲ್ಲಿರುವ ಯಾಂಗ್‌ಟ್ಸೆ ಎಂಬಲ್ಲಿ ಉಭಯ ದೇಶಗಳ ಯೋಧರು ಪರಸ್ಪರ ಕೈ ಮಿಲಾಯಿಸಿದ್ದಾರೆ. ಯಾಂಗ್‌ಟ್ಸೆಯಲ್ಲಿ ಗಸ್ತು ತಿರುಗುತ್ತಿದ್ದ ಭಾರತೀಯ ಯೋಧರ ಬಳಿ ಸುಖಾಸುಮ್ಮನೇ ಮಾತಿಗೆ ಮಾತು ಬೆಳೆಸಿರುವ ಚೀನಾ ಸೈನಿಕರು, ಭಾರತೀಯ ಯೋಧರಿಂದ ಪೆಟ್ಟು ತಿಂದು ವಾಪಸ್‌ ಆಗಿದ್ದಾರೆ. ಭಾರತದ ಆರು ಮಂದಿ ಯೋಧರಿಗೆ ಸಣ್ಣಪುಟ್ಟ ಗಾಯಗಳಾಗಿದೆ.

ಸುದ್ದಿ ಹರಡಿದ ಬೆನ್ನಲ್ಲೇ ಕಾಂಗ್ರೆಸ್ ಸೋಮವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ಈ ವಿಷಯವನ್ನು ಚರ್ಚಿಸುವ ಮೂಲಕ ಸರ್ಕಾರವು ರಾಷ್ಟ್ರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿದೆ ಎಂದು ಹೇಳಿದೆ.

ಇದನ್ನೂ ಓದಿ:ಸಾಧನೆಗೆ ಅಡ್ಡಿಯಾಗದ ಅಂಧತ್ವ: ಉದಯವಾಣಿಯಲ್ಲಿ “ಮಾನವ ಕಂಪ್ಯೂಟರ್‌’

ಕೇಂದ್ರವು ಯಾವುದೇ ಚರ್ಚೆಯಿಂದ ಹಿಂದೆ ಸರಿಯುವುದಿಲ್ಲ ಮತ್ತು ಸತ್ಯಗಳೊಂದಿಗೆ ಸಿದ್ಧವಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

Advertisement

ಹೈದರಾಬಾದ್ ಸಂಸದ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಲೋಕಸಭೆಯಲ್ಲಿ ಈ ವಿಷಯದ ಬಗ್ಗೆ ನಿರ್ಣಯವನ್ನು ಮಂಡಿಸಲಿದ್ದಾರೆ. ಕೇಂದ್ರವು ದೇಶವನ್ನು ಕತ್ತಲೆಯಲ್ಲಿಟ್ಟಿದೆ ಎಂದು ಆರೋಪಿಸಿದ ಅವರು, ಘರ್ಷಣೆಯ ಬಗ್ಗೆ ಸಂಸತ್ತಿಗೆ ಏಕೆ ಮಾಹಿತಿ ನೀಡಲಿಲ್ಲ ಎಂದು ಕೇಳಿದರು.

ಕಾಂಗ್ರೆಸ್ ಹಿರಿಯ ನಾಯಕರಾದ ಮನೀಶ್ ತಿವಾರಿ, ಶಶಿ ತರೂರ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಕೂಡ ಈ ವಿಷಯದ ಬಗ್ಗೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next